ಕಾಂಗ್ರೆಸ್‌ ವಿರೋಧ ಪಕ್ಷವಾಗಿಯೂ ವಿಫ‌ಲ: ಸಿಎಂ ಬೊಮ್ಮಾಯಿ


Team Udayavani, Feb 23, 2022, 7:35 AM IST

ಕಾಂಗ್ರೆಸ್‌ ವಿರೋಧ ಪಕ್ಷವಾಗಿಯೂ ವಿಫ‌ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಆಡಳಿತ ಪಕ್ಷವಾಗಿ ನೀವು ಕೆಲಸ ಮಾಡಲು ಯೋಗ್ಯರಲ್ಲ ಎಂದು ಜನ 2018 ರಲ್ಲಿ ತೀರ್ಮಾನ ಮಾಡಿದರು. ಕನಿಷ್ಠ ವಿರೋಧ ಪಕ್ಷವಾಗಿಯಾದರೂ ಕಾಂಗ್ರೆಸ್‌ ಪಕ್ಷ ಕೆಲಸ ಮಾಡಬೇಕಿತ್ತು. ವಿರೋಧ ಪಕ್ಷವಾಗಿಯೂ ಕಾಂಗ್ರೆಸ್‌ ವಿಫ‌ಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ಧಾಳಿ ನಡೆಸಿದರು.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದ ಮುಸುಕು ಅವರ ಹಾಗೂ ಅವರ ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನೂ ರಾಜಕೀಯವಾಗಿ ನೋಡುವುದು, ಧೆÌàಷದಿಂದ ನೋಡುವುದರಿಂದ ಅವರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ. ಸದನ ಶುಕ್ರವಾರದವರೆಗೂ ನಡೆಯಬೇಕಿತ್ತು.

ಸದನವನ್ನು ಇಂದೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ವಿರೋಧ ಪಕ್ಷದವರು ಸದನ ಕರೆಯಿರಿ ಚರ್ಚಿಸಬೇಕು ಎನ್ನುತ್ತಾರೆ. ಅಧಿವೇಶನ ನಡೆಯುವಾಗ ಚರ್ಚೆ ಮಾಡಲು ಅವರು ತಯಾರಿಲ್ಲ. ಯಾವುದೇ ವಿಚಾರವನ್ನೇ ಆಗಲಿ ಚರ್ಚೆ ಹಾಗೂ ವಾದ ಮಾಡಬಹುದು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಸರ್ಕಾರದ ಸಾಧನೆಯನ್ನು ಹೇಳಿಕೊಂಡಾಗ ಅದರ ನ್ಯೂನ್ಯತೆ ಗಳನ್ನು ಹೇಳಬಹುದಾಗಿತ್ತು. ಆ ಕರ್ತವ್ಯವನ್ನೂ ಅವರು ಮಾಡಲಿಲ್ಲ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಯ ಬಗ್ಗೆಯೂ ಚರ್ಚೆ ಮಾಡಬಹುದಾಗಿತ್ತು. ಯಾವುದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಸರ್ಕಾರ ಸಿದ್ಧವಿತ್ತು. ಆದರೆ, ಆ ಹೇಳಿಕೆಯಲ್ಲಿ ಏನೂ ಇಲ್ಲ ಎಂದು ಅವರಿಗೆ ಗೊತ್ತಿದೆ ಎಂದು ಅವರು ಹೇಳಿದರು.

ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ:
ಧರಣಿ ಮಾರ್ಗದ ಮುಖಾಂತರ ರಾಜ್ಯದ ಜನತೆ ಹಾಗೂ ಸದನದ ದಾರಿಯನ್ನು ತಪ್ಪಿಸಲು ನೋಡುತ್ತಿದ್ದಾರೆ. ವಸ್ತ್ರ ಸಂಹಿತೆಯ ಬಗ್ಗೆ ಉತ್ಛ ನ್ಯಾಯಾಲಯದಲ್ಲಿ ಗಂಭೀರವಾದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಅದರ ಅನುಷ್ಠಾನವಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗೊಂದಲಗಳನ್ನು ಸೃಷ್ಟಿ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ, ಅಂತಿಮ ಆದೇಶ ಬರುವವರೆಗೂ ಕಾದು, ಶಾಂತಿಯಿಂದ ಇರಬಹುದಾಗಿತ್ತು. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ಪರೀಕ್ಷೆಗಳಿವೆ ಎಂಬ ಕನಿಷ್ಠ ಸಂದೇಶವನ್ನು ಕೊಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಮಾನವೀಯತೆ ವಿಚಾರವನ್ನೇ ಇಟ್ಟುಕೊಂಡಿಲ್ಲ. ರಾಜಕಾರಣವೇ ಪ್ರಮುಖವಾಗಿದೆ.

ರಾಜಕಾರಣದಲ್ಲೂ ಕೂಡ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್‌ ಅಧ್ಯಕ್ಷರು, ಹಿರಿಯರು. ಬಹಳ ವರ್ಷಗಳಿಂದ ರಾಜಕಾರಣದಲ್ಲಿರುವವರು. ಅವರ ಅನುಭವ ಎಲ್ಲಿ ಹೋಯಿತು. ಅವರ ಅನುಭವದಿಂದ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದರೆ, ಜನ ಮೆಚ್ಚಿಕೊಳ್ಳುತ್ತಿದ್ದರು ಎಂದರು.

ಮತಾಂತರ ನಿಷೇಧ ಕಾಯ್ದೆ:
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಮಂಡನೆಯಾಗಲಿಲ್ಲ. ಈಗ ಮಂಡಿಸಲು ಸಾಧ್ಯವಾಗಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸದನ ವ್ಯವಸ್ಥಿತವಾಗಿಲ್ಲ. ಚರ್ಚೆ ಮಾಡಿ ಅಂಗೀಕರಿಸಲಾಗುವುದು ಎಂದರು.

ಜೆ.ಪಿ ನಡ್ಡಾ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಅಧಿಕೃತ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅಥೆìçಸಿಕೊಂಡಿದ್ದಾರೆ. ಹೇಳಿಕೆಯ ಪೂರ್ಣ ಪಾಠವನ್ನು ತೆಗೆದುಕೊಂಡರೆ, ಅವರು ಯಾವುದೇ ಕಾನೂನಿನ ವಿರುದ್ಧವಾಗಲಿ, ರಾಷ್ಟ್ರಧ್ವಜವನ್ನು ಅಪಮಾನ ಮಾಡುವ ಯಾವುದೇ ವಿಚಾರವನ್ನು ಅವರು ಹೇಳಿಲ್ಲ. ಇದು ಬಹಳ ಸ್ಪಷ್ಟವಾಗಿದೆ. ಅದನ್ನು ತಿರುಚಿ ರಾಜಕೀಯವಾಗಿ ಬಳಸಲು ಕಾಂಗ್ರೆಸ್‌ ಪ್ರಯತ್ನ ಮಾಡುತ್ತಿದೆ ಎಂದರು. ಕಾಂಗ್ರಸ್‌ ಪಕ್ಷದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಅಷ್ಟಾದರೂ ಮಾಡಲಿ ಎಂದರು.

ಮಾರ್ಚ್‌ 4 ರಂದು ಬಜೆಟ್‌ :
ಬಜೆಟ್‌ ಮಾರ್ಚ್‌ 04 ರಂದು ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.