Elections: ಮಧ್ಯಪ್ರದೇಶ,ತೆಲಂಗಾಣ, ಛತ್ತೀಸ್‌ಗಢ ಚುನಾವಣೆ: ʼಕೈʼ ಮೊದಲ ಪಟ್ಟಿ ಬಿಡುಗಡೆ
Team Udayavani, Oct 15, 2023, 10:01 AM IST
ನವದೆಹಲಿ: ಇದೇ ವರ್ಷದಲ್ಲಿ ನಡೆಯಲಿರುವ ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ(ಅ.15 ರಂದು) ಬಿಡುಗಡೆ ಮಾಡಿದೆ.
ಮಧ್ಯಪ್ರದೇಶದ 144 ವಿಧಾನಸಭಾ ಕ್ಷೇತ್ರ, ಛತ್ತೀಸ್‌ಗಢದ 30 ಮತ್ತು ತೆಲಂಗಾಣದಲ್ಲಿ 55 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಘೋಷಿಸಿದೆ.
ಕ್ಷೇತ್ರ ಮತ್ತು ಪ್ರಮುಖರ ಹೆಸರು..
ಮಧ್ಯ ಪ್ರದೇಶ: ಮಧ್ಯ ಪ್ರದೇಶದ 230 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 144 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ರಿವೀಲ್ ಮಾಡಿದೆ. ಮುಖ್ಯವಾಗಿ ಮಧ್ಯಪ್ರದೇಶದಲ್ಲಿ ಛಿಂದ್ವಾರಾ ಕ್ಷೇತ್ರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ಅವರನ್ನು ಚಚೌರಾದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಸಿಎಂ ಪುತ್ರ ಜೈವರ್ಧನ್ ಸಿಂಗ್ ರಾಘೋಘರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬುಧ್ನಿ ಕ್ಷೇತ್ರದಿಂದ ಕಾಂಗ್ರೆಸ್ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಚುರ್ಹಾತ್ ನಿಂದ ಅಜಯ್ ಸಿಂಗ್ ರಾಹುಲ್, ರೌ ಕ್ಷೇತ್ರದಿಂದ ದಿಂದ ಜಿತು ಪಟ್ವಾರಿ, ಅತೆರ್ ನಿಂದ ಹೇಮಂತ್ ಕಟಾರೆ, ಝಬುವಾ ಕ್ಷೇತ್ರದಿಂದ ವಿಕ್ರಾಂತ್ ಭುರಿಯಾ ಅವರಿಗೆ ಟಿಕೆಟ್ ನೀಡಲಾಗಿದೆ.
ಚುನಾವಣೆ ಯಾವಾಗ?: ನವೆಂಬರ್ 17 ರಂದು ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ಛತ್ತೀಸ್‌ಗಢ: 90 ವಿಧಾನ ಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 30 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಛತ್ತೀಸ್‌ಗಢದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರು ತನ್ನ ಬಲಿಷ್ಠ ಕ್ಷೇತ್ರವಾದ ಅಂಬಿಕಾಪುರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪಟಾನ್‌ನಿಂದ ಸ್ಪರ್ಧಿಸಲಿದ್ದಾರೆ. ವಿಶೇಷವೆಂದರೆ 30 ಅಭ್ಯರ್ಥಿಗಳ ಪೈಕಿ 14 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಇದಲ್ಲದೆ ಮೊದಲ ಪಟ್ಟಿಯಲ್ಲಿ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.
ಚುನಾವಣೆ ಯಾವಾಗ?: ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ತೆಲಂಗಾಣ: 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ 55 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮುಖ್ಯವಾಗಿ ಕೊಡಂಗಲ್ ಕ್ಷೇತ್ರದಿಂದ ಅನುಮುಲಾ ರೇವಂತ್ ರೆಡ್ಡಿ, ಹುಜೂರ್‌ನಗರದಿಂದ ಉತ್ತಮ್‌ಕುಮಾರ್ ರೆಡ್ಡಿ ಅವರಿಗೆ ʼಕೈʼ ಟಿಕೆಟ್ ನೀಡಿದೆ. ಇತರೆ ಪ್ರಮುಖ ಹೆಸರುಗಳೆಂದರೆ, ಮುಳುಗು ಕ್ಷೇತ್ರದಿಂದ ದಾಸರಿ ದಾಸರಿ ಸೀತಕ್ಕ ಅವರಿಗೆ ಟಿಕೆಟ್ ನೀಡಿದ್ದು, ಮೇದಕ್‌ನಿಂದ ಮೈನಂಪಳ್ಳಿ ರೋಹಿತ್ ರಾವ್ ಮತ್ತು ಮಲ್ಕಾಜ್‌ಗಿರಿಯಿಂದ ಮೈನಂಪಳ್ಳಿ ಹನುಮಂತರಾವ್ ಸ್ಪರ್ಧಿಸಲಿದ್ದಾರೆ.
ಚುನಾವಣೆ ಯಾವಾಗ?: ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
Congress releases list of 144 candidates for upcoming #MadhyaPradesh assembly polls. #MadhyaPradeshElection2023 #PollsWithAIR pic.twitter.com/B81gG0mEPj
— All India Radio News (@airnewsalerts) October 15, 2023
Congress releases name of 30 candidates for #Chhattisgarh assembly polls. #ChhattisgarhElection2023 #PollsWithAIR pic.twitter.com/UVksMVAWWY
— All India Radio News (@airnewsalerts) October 15, 2023
Congress releases name of 55 candidates for #Telangana assembly polls. #TelanganaElection2023 #PollsWithAIR pic.twitter.com/uRPOtqEKfj
— All India Radio News (@airnewsalerts) October 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.