ರಾಜನ್ ವಿರುದ್ದ ನೀತಿ ಆಯೋಗದ ಹೇಳಿಕೆ ಹಾಸ್ಯಾಸ್ಪದ : ಕಾಂಗ್ರೆಸ್
Team Udayavani, Sep 4, 2018, 11:48 AM IST
ಹೊಸದಿಲ್ಲಿ : ‘ದೇಶದ ಆರ್ಥಿಕತೆ ಕುಸಿಯಲು ನೋಟು ಅಮಾನ್ಯ ಕ್ರಮ ಕಾರಣವಲ್ಲ; ಬದಲು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ರಘುರಾಮ್ ರಾಜನ್ ಅವರ ಅಸಮರ್ಪಕ ನೀತಿಗಳೇ ಕಾರಣ’ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿರುವುದನ್ನು ಕಾಂಗ್ರೆಸ್ ಬಲವಾಗಿ ಟೀಕಿಸಿದೆ.
ನೀತಿ ಆಯೋಗದ ಉಪಾಧ್ಯಕ್ಷರ ಈ ಹೇಳಿಕೆಯು ಅತ್ಯಂತ ಅಕ್ಷೇಪಾರ್ಹವಾಗಿದ್ದು ಹಾಸ್ಯಾಸ್ಪದವೂ ಆಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ನೀತಿ ಆಯೋಗದ ಉಪಾಧ್ಯಕ್ಷರ ಹೇಳಿಕೆಯು “ತಪ್ಪನ್ನು ಬೇರೆಯವರ ಮೇಲೆ ಹೊರಿಸುವ’ ತಂತ್ರವಾಗಿದೆ; ಹಿಂದಿನ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಬ್ಯಾಂಕುಗಳ ಎನ್‌ಪಿಎ (ಅನುತ್ಪಾದಕ ಆಸ್ತಿ) ಕೇವಲ 2 ಲಕ್ಷ 83 ಸಾವಿರ ಕೋಟಿ ರೂ. ಇತ್ತು ಮತ್ತು ಅದು ಹತೋಟಿಯ ಒಳಗೇ ಇತ್ತು. ನಾಲ್ಕು ವರ್ಷಗಳ ಬಳಿಕ ಈಗ ಬಿಜೆಪಿ ಆಡಳಿತೆಯಲ್ಲಿ ಬ್ಯಾಂಕುಗಳ ಎನ್‌ಪಿಎ 12 ಲಕ್ಷ ಕೋಟಿ ರೂ. ತಲುಪಿದೆ. ಈ ಅಂಕಿ ಅಂಶವನ್ನು ಮೋದಿ ಸರಕಾರವೇ 2018ರ ಜು.31ರಂದು ಸಂಸತ್ತಿನಲ್ಲಿ ಲಿಖೀತ ಉತ್ತರದಲ್ಲಿ ತಿಳಿಸಿದೆ. ನೋಟು ಅಮಾನ್ಯ ಕ್ರಮದಿಂದ ಜಿಡಿಪಿ ಶೇ.1.5ರಷ್ಟು ಕುಸಿದಿದೆ ಮತ್ತು ಇದರಿಂದ ದೇಶಕ್ಕೆ 2 ಲಕ್ಷ 25 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸುರ್ಜೆವಾಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.