Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Team Udayavani, Dec 28, 2024, 9:27 PM IST
ಕೊಚ್ಚಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿರುವ ಹೊರತಾಗಿಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟನಾ ಸಮಾರಂಭವೊಂದರಲ್ಲಿ ಭಾಗಿಯಾಗಿರುವುದು ವಿವಾದಕ್ಕೆ ಕಾರಣವಾಗಿದೆ.
ಪಿಣರಾಯಿ ಕ್ರಮಕ್ಕೆ ಕೇರಳ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್ ಮಾತನಾಡಿ, “ಒಬ್ಬ ಮುಖ್ಯಮಂತ್ರಿಗಳ ಈ ನಡೆ ಅನುಚಿತ ಹಾಗೂ ಅಗೌರವಯುತವಾದದ್ದು. ಡಾ. ಸಿಂಗ್ ನಿಧನದ ಶೋಕಾಚರಣೆ ವೇಳೆ ಕೊಚ್ಚಿಯ ವಿಮಾನ ನಿಲ್ದಾಣದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಕಾರ್ಯಕ್ರಮಕ್ಕೆ ಹೋಗಬಾರದಿತ್ತು. ಅಲ್ಲದೆ, ವಿಮಾನ ನಿಲ್ದಾಣ ಆಡಳಿತದವರಿಗೆ ಕಾರ್ಯಕ್ರಮ ಮುಂದೂಡುವಂತೆ ಹೇಳಬೇಕಿತ್ತು’ ಎಂದಿದ್ದಾರೆ.
ಇದನ್ನೂ ಓದಿ: Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.