Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Team Udayavani, Nov 8, 2024, 6:24 AM IST
ಮುಂಬೈ: ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರಿಗೆ ಕಾಂಗ್ರೆಸ್ ಖಾಲಿ ಹಾಳೆಗಳಿರುವ(ಮುಖಪುಟದಲ್ಲಷ್ಟೇ ಸಂವಿಧಾ ನದ ಆಶಯ ಬರೆಯಲಾದ) ಸಂವಿಧಾನದ ಪುಸ್ತಕ ಹಂಚಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಮಾಡಿರುವ ಈ ವಿಡಿಯೋ ವೈರಲ್ ಆಗಿದ್ದು, “ಕಾಂಗ್ರೆಸ್ ಇದೇ ರೀತಿ ಸಂವಿಧಾನವನ್ನು ಅಳಿಸಲು ಮುಂದಾಗಿದೆ’ ಎಂದೂ ಟೀಕಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾರ್ಯಕ್ರಮಕ್ಕೆ ಹಾಜರಾದ ಎಲ್ಲರಿಗೂ ನೋಟ್ ಪುಸ್ತಕ, ಪೆನ್ ನೀಡಲಾಗಿತ್ತು. ಇದು ಸಂವಿಧಾನದ ಪ್ರತಿಯಲ್ಲ ಎಂದು ಹೇಳಿದೆ.
ಮತ್ತೊಂದೆಡೆ ಕೆಂಪು ಬಣ್ಣದ ಪುಸ್ತಕ ನೀಡುವ ಮೂಲಕ ಕಾಂಗ್ರೆಸ್ ನಗರ ನಕ್ಸಲರನ್ನು ಸೆಳೆಯಲು ಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್ ಹೇಳಿದ್ದು, ಇದಕ್ಕೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಮನುಸ್ಮತಿಯಿಂದ ಪ್ರೇರಣೆ ಪಡೆದು 1949ರಲ್ಲಿ ನೀವು (ಆರೆಸ್ಸೆಸ್) ಸಂವಿಧಾನದ ಮೇಲೆ ದಾಳಿಗೆ ಯತ್ನಿಸಿದಿರಿ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.