ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್
Team Udayavani, Aug 9, 2021, 11:01 AM IST
ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಧಿಕೃತ ಟ್ವೀಟರ್ ಖಾಎಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದಕ್ಕಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಹಾಗು ಎನ್ ಎಸ್ ಯು ಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಇಂದು (ಸೋಮವಾರ, ಆಗಸ್ಟ್ 9) ದೇಶದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ನಮ್ಮ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದರೂ ಕೂಡ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದೆ.
ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ದೆಹಲಿಯಲ್ಲಿ ಇತ್ತೀಚೆಗೆ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಪೋಷಕರನ್ನು ಭೇಟಿಯಾಗಿದ್ದರು, ಮತ್ತು ಅವರೊಂದಿಗೆ ಮಾತಾಡುತ್ತಿರುವಾಗ ತೆಗೆಸಿಕೊಂಡಿದ್ದ ಫೋಟೋವನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದರು. ಪೋಷಕರ ಗುರುತನ್ನು ಬಹಿರಂಗಪಡಿಸುವ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು ಟ್ವಿಟರ್ ಶುಕ್ರವಾರ ತೆಗೆದುಹಾಕಿದೆ.
ಟ್ವೀಟರ್ ತೆಗೆದುಕೊಂಡ ಈ ಕ್ರಮವನ್ನು ಕೇಂದ್ರ ಸರ್ಕಾರದ ಒತ್ತಡದಿಂದ ಇದನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿರುವ ಟ್ವೀಟರ್ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಸ್ಟೂಡೆಂಟ್ಸ್ ವಿಂಗ್ ಪ್ರತಿಭಟನೆ ಮಾಡುವುದಾಗಿ ಹಾಗೂ ಎನ್ ಎಸ್ ಯು ಐ ಸಂಸತ್ ಭವನದ ಸುತ್ತ ಮುತ್ತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.
ನಿರಂತರವಾಗಿ ಕೇಂದ್ರ ಸರ್ಕಾರದ ಮೇಲೆ ಟ್ವೀಟರ್ ಖಾತೆಯ ಮೂಲಕ ವಾಗ್ದಾಳಿ ಮಾಡುತ್ತಿದ್ದ ರಾಹುಲ್ ಗಾಂಧಿ, ಎರಡು ದಿನಗಳ ತಾತ್ಕಾಲಿಕ ಅಮಾನತುಗೊಳಿಸಿರುವ ಕಾರಣದಿಂದಾಗಿ ಯಾವುದೇ ಟ್ವಿಟ್ ಮಾಡುವುದಕ್ಕೆ ಆಗಿರಲಿಲ್ಲ. ಕಾಂಗ್ರೆಸ್ ಶನಿವಾರ ತಡರಾತ್ರಿ ಈ ಮಾಹಿತಿಯನ್ನು ನೀಡಿದೆ, ಜೊತೆಗೆ ಖಾತೆಯನ್ನು ಮರುಸ್ಥಾಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ ಎಂದು ಹೇಳಿತ್ತು.
ಪಕ್ಷದ ನಾಯಕರು ಟ್ವಿಟರ್ ಮತ್ತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಲು ಆರಂಭಿಸಿದರು, ಆದರೆ ಕಾಂಗ್ರೆಸ್ ಕಾರ್ಯಕರ್ತರು “ಮುಖ್ಯ ಭೀ ರಾಹುಲ್” ಪ್ರವೃತ್ತಿಯನ್ನು ಆರಂಭಿಸಿದರು.
ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್ ಎಸ್ ಯು ಐ ನ ಮುಖ್ಯಸ್ಥ ನೀರಜ್ ಕುಂದನ್, ಬಿಜೆಪಿ ಸರ್ಕಾರದ ‘ಬೆದರಿಕೆ ರಾಜಕಾರಣ’ ಮಿತಿ ಮೀರುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು ಅಮಾನತುಗೊಳಿಸಲು ಟ್ವಿಟರ್ ಮೇಲೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನ ಯುವ ಕಾಂಗ್ರೆಸ್ ನ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಪ್ರತಿಕ್ರಯಿಸಿ, ಟ್ವೀಟರ್ ಇಂಡಿಯಾ ಕೇಂದ್ರ ಸರ್ಕಾರದ ನಿರ್ದೇಶನದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ವೀಟರ್ ಇಂಡಿಯಾ ರಾಹುಲ್ ಗಾಂಧಿ ಅವರ ಖಾತೆಯನ್ನು ಬ್ಲಾಕ್ ಮಾಡಬಹುದು ಆದರೇ, ಅವರ ಜನ ಪರ ಧ್ವನಿಯನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ನಿರಂತರವಾಗಿ ಬಡ ಜನರ ಧ್ವನಿಯಾಗಿ, ಸಮಾಜದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಾರೆ. ನಾವೆಲ್ಲಾ ಅವರ ಬೆಂಬಲಕ್ಕಾಗಿ ಇದ್ದೇವೆ ಎಂದಿದ್ದಾರೆ.
ಸದ್ಯ, ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆ ಜಾಲ್ತಿಯಲ್ಲಿದೆ.
ಇದನ್ನೂ ಓದಿ : ಸಚಿವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ, ವಿಜಯೋತ್ಸವಗಳು ಬೇಕು: ಕುಮಾರಸ್ವಾಮಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.