“ಕೈ’ ಟ್ವೀಟ್ ಎಡವಟ್ಟು
Team Udayavani, Nov 22, 2017, 6:30 AM IST
ಹೊಸದಿಲ್ಲಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವ ಕುರಿತು ಘೋಷಣೆ ಮಾಡಿ ದಿನ ಕಳೆಯುತ್ತಲೇ ಆ ಪಕ್ಷದ ಯುವ ಘಟಕ ಎಡವಟ್ಟು ಮಾಡಿ ಕೊಂಡಿದೆ. ಪ್ರಧಾನಿ ಮೋದಿಯವರು ಇಂಗ್ಲಿಷ್ ಮಾತನಾಡುವ ಬಗ್ಗೆ ಆಕ್ಷೇಪಾರ್ಹ ಚಿತ್ರವನ್ನು ಪಕ್ಷದ ಯುವ ಘಟಕ ಟ್ವಿಟರ್ ಹ್ಯಾಂಡಲ್‌ನಲ್ಲಿ ಪ್ರಕಟಿಸಿದ್ದಕ್ಕೆ ಪ್ರಬಲ ಆಕ್ಷೇಪ ವ್ಯಕ್ತವಾಗಿದೆ.
ಬಳಿಕ ಅದನ್ನು ಅಳಿಸಿ ಹಾಕಲಾಗಿದೆ. ಪಿಎಂ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್, ಬ್ರಿಟನ್ ಪ್ರಧಾನಿ ಥೆರೇಸಾ ಮೇ ಸಂಭಾಷಣೆ ಮಾಡುವ ಫೋಟೋದಲ್ಲಿ ಮೋದಿ “ಪ್ರತಿಪಕ್ಷಗಳು ನನ್ನ ವಿರುದ್ಧ ಎಷ್ಟೊಂದು ಮೆಮೆ (meme)ಗಳನ್ನು ಹೇಳುತ್ತಿವೆ ಎನ್ನುವುದು ಗೊತ್ತೇ’ ಎಂದು ಕೇಳುತ್ತಾರೆ. ಅದನ್ನು ಸರಿಪಡಿಸಿದ ಟ್ರಂಪ್ “ಅದು ಮೆಮೆ ಅಲ್ಲ ಮೀಮ್’ ಎನ್ನುತ್ತಾರೆ. ಅದಕ್ಕೆ ಥೆರೇಸಾ ಮೇ “ನೀವು ಚಹಾ ಮಾರಲು ಹೋಗಿ’ ಎನ್ನುತ್ತಾರೆ.
ಈ ಟ್ವೀಟ್ ಅನ್ನು ಗುಜರಾತ್ ಸಿಎಂ ವಿಜಯ ರುಪಾಣಿ ಬಲವಾಗಿ ಆಕ್ಷೇಪಿಸಿದ್ದು “ರಾಹುಲ್ ಅದನ್ನು ಸಮರ್ಥಿ ಸುತ್ತಾರೆಯೇ? ಇದು ಬಡವರ ವಿರುದ್ಧದ ನಿಲುವನ್ನು ಸೂಚಿಸುತ್ತದೆ’ ಎಂದಿದ್ದಾರೆ. ಮುಜುಗರಕ್ಕೆ ಒಳಗಾದ ಕಾಂಗ್ರೆಸ್, ಇಂಥ ಲೇವಡಿ ಒಪ್ಪುವುದಿಲ್ಲ. ಭಿನ್ನಾಭಿಪ್ರಾಯ ಏನಿದ್ದರೂ ರಾಜಕೀಯ ಮತ್ತು ತತ್ವಗಳಿಗೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.