Rajasthan ಕಾಂಗ್ರೆಸ್‌ಗೆ ಮತ್ತೊಂದು ಅವಕಾಶ ಸಿಗಲಿದೆ: ಸಚಿನ್ ಪೈಲಟ್
Team Udayavani, Nov 25, 2023, 4:04 PM IST
ಜೈಪುರ (ರಾಜಸ್ಥಾನ): ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ್ತೊಂದು ಅವಕಾಶ ಸಿಗಲಿದೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದು, ಈ ಬಾರಿ ಪರ್ಯಾಯ ಸರ್ಕಾರಗಳ ಪ್ರವೃತ್ತಿಯನ್ನು ಬದಲಾಯಿಸುವತ್ತ ಜನರ ಚಿತ್ತವಿದೆ ಎಂದು ಹೇಳಿದ್ದಾರೆ.
ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ (ಮತ್ತೆ ಅಧಿಕಾರಕ್ಕೆ ಬರಲು) ಕಾಂಗ್ರೆಸ್‌ಗೆ ಮತ್ತೊಂದು ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯಾಬಲವನ್ನು ನಾವು ಪಡೆಯುತ್ತೇವೆ. ಇಲ್ಲಿನ ಜನರು ಬದ್ಧತೆಯನ್ನು ಉಳಿಸಿಕೊಳ್ಳುವವರಿಗೆ ಮತ ಹಾಕುತ್ತಾರೆ ಎಂಬ ನಂಬಿಕೆ ಇದೆ’ ಎಂದು ತಿಳಿಸಿದ್ದಾರೆ.
ನನ್ನ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ.”ನಾವು ಒಟ್ಟಾಗಿ (ಪಕ್ಷಕ್ಕಾಗಿ) ಕೆಲಸ ಮಾಡಿದ್ದೇವೆ. ಎರಡು ಅಥವಾ ಮೂರು ಜನರಿಂದ ಇದು ಸಾಧ್ಯ ಎಂದು ಹೇಳುತ್ತಿಲ್ಲ. ಬದಲಾಗಿ ಇಡೀ ರಾಜಸ್ಥಾನದ ಕಾಂಗ್ರೆಸ್ ಘಟಕವು ಒಗ್ಗೂಡಿದೆ ಎಂದು ಹೇಳಿದರು.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರದ ನಂತರ ಶನಿವಾರ ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಪೈಕಿ 199 ರಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಕರಣಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ಅವರ ನಿಧನದಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ.
ಶಾಂತಿಯುತ ಮತದಾನಕ್ಕಾಗಿ ಒಟ್ಟು 1,02,290 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 69,114 ಪೊಲೀಸ್ ಸಿಬ್ಬಂದಿ, 32,876 ರಾಜಸ್ಥಾನ ಹೋಮ್ ಗಾರ್ಡ್, ಫಾರೆಸ್ಟ್ ಗಾರ್ಡ್ ಮತ್ತು ಆರ್‌ಎಸಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು 700 ಕಂಪನಿಗಳ ಸಿಎಪಿಎಫ್ ಅನ್ನು ನಿಯೋಜಿಸಲಾಗಿದೆ.
2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಎಸ್ಪಿ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಸರ್ಕಾರ ರಚಿಸಿದ್ದರು.
ಎಲ್ಲಾ ಐದು ರಾಜ್ಯಗಳ ಮತಗಳ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.