ಸಂಸತ್‌ನಲ್ಲಿ ಕೋಲಾಹಲ
Team Udayavani, Jul 10, 2019, 6:00 AM IST
ನವದೆಹಲಿ: ರಾಜ್ಯದಲ್ಲಿನ ರಾಜಕೀಯ ಹೈಡ್ರಾಮಾ ಸಂಸತ್‌ನಲ್ಲಿ ಪ್ರತಿಧ್ವನಿಸಿದ್ದೂ ಅಲ್ಲದೇ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಯಿತು.
ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರೆ, ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಅಚ್ಚರಿಯೆಂದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಇತರೆ ಸದಸ್ಯರ ಜತೆಗೂಡಿ ಘೋಷಣೆಗಳನ್ನು ಕೂಗಿದ್ದು ಕಂಡುಬಂತು.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಕರ್ನಾಟಕದ ಬಿಕ್ಕಟ್ಟು ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಕಾಂಗ್ರೆಸ್ ಕೇಳಿಕೊಂಡಿತಾದರೂ ಅದಕ್ಕೆ ಸ್ಪೀಕಲ್ ಓಂ ಬಿರ್ಲಾ ಅವಕಾಶ ಕಲ್ಪಿಸಲಿಲ್ಲ. ಸೋಮವಾರವೇ ಈ ವಿಚಾರದ ಚರ್ಚೆ ನಡೆದಿರುವ ಕಾರಣ, ಮತ್ತೂಮ್ಮೆ ಅವಕಾಶ ನೀಡಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘ಕರ್ನಾಟಕ ಸರ್ಕಾರವನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಶಾಸಕರ ಕುದುರೆ ವ್ಯಾಪಾರದಲ್ಲಿ ಬಿಜೆಪಿ ತೊಡಗಿದೆ’ ಎಂದು ಆರೋಪಿಸಿದರು.
ಅದಕ್ಕೆ ಉತ್ತರಿಸಿದ ಗೃಹ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಬಿಕ್ಕಟ್ಟು ಕಾಂಗ್ರೆಸ್‌ನ ಆಂತರಿಕ ಸಮಸ್ಯೆ. ತನ್ನ ಮನೆಯನ್ನು ಸರಿಯಾಗಿ ಇಟ್ಟುಕೊಳ್ಳಲು ಆಗದ ಕಾಂಗ್ರೆಸ್, ಈಗ ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.