ಭಾರತದ ಕಾನೂನು ಉಲ್ಲಂಘಿಸಿದರೆ ವಿದೇಶಿ ಪತ್ರಕರ್ತರಿಗೆ ನಿರ್ಬಂಧ
Team Udayavani, Dec 29, 2018, 1:10 AM IST
ನವದೆಹಲಿ: ವಿದೇಶದ ಎಲ್ಲಾ ಪತ್ರಕರ್ತರೂ ಭಾರತದ ಕಾನೂನು ಗೌರವಿಸಬೇಕು. ಆ ರೀತಿ ನಡೆದುಕೊಳ್ಳದವರ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಖಾತೆ ಶುಕ್ರವಾರ ಎಚ್ಚರಿಕೆ ನೀಡಿದೆ.
ರಾಯಿಟರ್ಸ್ ಸುದ್ದಿ ಸಂಸ್ಥೆ ಪತ್ರಕರ್ತರೊಬ್ಬರಿಗೆ ವೀಸಾ ನಿರಾಕರಿಸಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ಗೃಹ ಖಾತೆಯ ಹಿರಿಯ ಅಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ. ಕಾನೂನಿನ ಅನ್ವಯ ಶಿಕ್ಷೆ ನೀಡುತ್ತೇವೆ ಎಂದರೆ, ವಿದೇಶಿ ಪತ್ರಕರ್ತರನ್ನು ಕಪ್ಪುಪಟ್ಟಿಗೆ ಸೇರಿಸುವುದು ಎಂಬ ಅರ್ಥವಲ್ಲ ಎಂದು ಹೇಳಿದ್ದಾರೆ.
ವೀಸಾ ಉಲ್ಲಂಘನೆ ನಿಯಮದ ಕಾರಣಕ್ಕಾಗಿ ಪತ್ರಕರ್ತನನ್ನು ವಿಮಾನ ನಿಲ್ದಾಣದಿಂದಲೇ ವಾಪಸ್ ಕಳುಹಿಸಲಾಗಿತ್ತು. ಅದು ಶಾಶ್ವತ ನಿಷೇಧವಲ್ಲ. 6 ತಿಂಗಳು ಅಥವಾ 1 ವರ್ಷದ ಬಳಿಕ ಅದನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.