ಶಿಕ್ಷಕರ ಹಾಜರಿ ಮೇಲೆ ನಿಯಂತ್ರಣ ಕೊಠಡಿ ನಿಗಾ
Team Udayavani, Mar 31, 2017, 2:09 AM IST
ಭೋಪಾಲ್: ಮಕ್ಕಳು ಶಾಲೆಗೆ ಹೋಗುತ್ತಾರೋ ಇಲ್ಲವೋ ಎನ್ನುವುದನ್ನು ಪೋಷಕರಿಗೆ ಮಾಹಿತಿ ನೀಡಲು ಎಸ್‌ಎಂಎಸ್, ಇ-ಮೇಲ್ ಹೀಗೆ ಏನೇನೋ ಆಧುನಿಕ ತಂತ್ರಜ್ಞಾನಗಳನ್ನು ಅನುಸರಿಸಲಾಗುತ್ತದೆ. ಆದರೆ ಶಿಕ್ಷಕರೇ ಕರ್ತವ್ಯಕ್ಕೆ ಬರುತ್ತಾರೋ ಇಲ್ಲವೋ ಎನ್ನುವುದನ್ನು ಕಂಡುಕೊಳ್ಳಲು ಮಧ್ಯಪ್ರದೇಶದಲ್ಲಿ ಮುಖ್ಯ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಮಧ್ಯಪ್ರದೇಶದಲ್ಲಿರುವ 18 ಸಾವಿರ ಸರಕಾರಿ ಶಾಲೆಗಳ ಶಿಕ್ಷಕರಿಗೆ ಇದು ಅನ್ವಯ.
ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆಯನ್ನು ಆಯಾ ಶಾಲೆಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುತ್ತದೆ. ಯಾರು ಬೇಕಾದರೂ ನಿಗದಿತ ಸಂಖ್ಯೆಗೆ ಡಯಲ್ ಮಾಡಿ ಶಾಲೆಗೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿದ್ದಾರೋ ಇಲ್ಲವೋ ಎನ್ನುವುದನ್ನು ಖಾತರಿಪಡಿಸಿಕೊಳ್ಳಬಹುದು. ಈ ಅಂಶವನ್ನು ಭೋಪಾಲ್‌ನಲ್ಲಿರುವ ನಿಯಂತ್ರಣ ಕೊಠಡಿಗೆ ಹೇಳಬಹುದು ಎಂದು ಮಧ್ಯಪ್ರದೇಶ ಶಿಕ್ಷಣ ಸಚಿವ ವಿಜಯ ಶಾ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, “12ನೇ ತರಗತಿಯಲ್ಲಿ ಶೇ.75ಕ್ಕೂ ಹೆಚ್ಚು ಅಂಕ ಗಳಿಸುವ, ಕುಟುಂಬದ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು “ಮುಖ್ಯಮಂತ್ರಿ ಮೇಧಾವಿ ಚಾತ್ರ ಪ್ರೋತ್ಸಾಹನ್ ಯೋಜನೆ’ಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ,” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.