ಲವ್ ಜಿಹಾದ್ ಪ್ರಕರಣ ವಿಚಾರಣೆ ವೇಳೆ ವಾಗ್ವಾದ
Team Udayavani, Oct 10, 2017, 7:25 AM IST
ನವದೆಹಲಿ: ತೀವ್ರ ಚರ್ಚೆಗೊಳಗಾಗಿರುವ ಕೇರಳದ ಲವ್ ಜಿಹಾದ್ ಪ್ರಕರಣದ ವಿಚಾರಣೆ ವೇಳೆ ಎರಡೂ ಕಡೆಯ ನ್ಯಾಯವಾದಿಗಳು ವಾಗ್ವಾದಕ್ಕಿಳಿದ ಘಟನೆ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ನಡೆದಿದೆ.
ಪ್ರತಿವಾದಿ ವಕೀಲ ದುಶ್ಯಂತ್ ದವೆ ಅವರು, ವಾದ ಮಂಡಿಸುವ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥರ ಹೆಸರನ್ನೂ ಎಳೆದು ತಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯ ವಕೀಲರ ಮಧ್ಯೆ ವಾಗ್ವಾದ ತಾರಕಕ್ಕೇ ರುತ್ತಿ ದ್ದಂತೆ, ಒಂದು ಹಂತದಲ್ಲಿ ತೀವ್ರ ಆಕ್ರೋಶ ಕ್ಕೊಳಗಾದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಪ್ರಕರಣಕ್ಕೆ ಸಂಬಂಧವಿಲ್ಲದ ವಾದಗಳನ್ನು ಇಲ್ಲಿ ಎಳೆದು ತರಬೇಡಿ. ಇಂಥ ವಾದವನ್ನು ಸಹಿಸಲಾಗದು ಎಂದು ಆಕ್ಷೇ ಪಿಸಿ ವಿಚಾರಣೆಯನ್ನು ಮುಂದೂಡಿದ ಘಟನೆ ನಡೆದಿದೆ.
ಹಿಂದೂ ಯುವತಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಶಫಿನ್ ಜಹಾನ್ರನ್ನು ವಿವಾಹವಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಎನ್ಐಎ ತನಿಖೆ ಆದೇಶವನ್ನು ಹಿಂಪಡೆಯುವಂತೆ ಶಫಿನ್ ಜಹಾನ್ ಕೋರ್ಟ್ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.