9th Parole; ಅಪರಾಧಿ ರಾಮ್ ರಹೀಮ್ ಗೆ ಮತ್ತೆ 50 ದಿನಗಳ ಪೆರೋಲ್!!
ಅತ್ಯಾಚಾರ , ಹತ್ಯೆ ಕೇಸ್ ನಲ್ಲಿ ಶಿಕ್ಷೆಗೊಳಗಾಗಿರುವ ಅಪರಾಧಿ
Team Udayavani, Jan 19, 2024, 8:35 PM IST
ಹೊಸದಿಲ್ಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಪ್ರಮುಖ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಈ ಹಿಂದೆ ನವೆಂಬರ್ 2023 ರಲ್ಲಿ 21 ದಿನಗಳ ಪೆರೋಲ್‌ನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಕಳೆದ ವರ್ಷ ಮೂರು ಬಾರಿ ಪೆರೋಲ್ ನೀಡಲಾಗಿತ್ತು ಎಂಬುದು ಗಮನಾರ್ಹ ವಿಚಾರವಾಗಿದ್ದು, 4 ವರ್ಷಗಳಲ್ಲಿ 9 ನೇ ಪೆರೋಲ್ ಪಡೆದಿದ್ದು, ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಸಾವಿರಾರು ಅನುಯಾಯಿಗಳನ್ನು ಹೊಂದಿರುವ 56 ವರ್ಷದ ರಾಮ್ ರಹೀಮ್, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಹಲವಾರು ಬಾರಿ ಪೆರೋಲ್‌ನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಶಿಷ್ಯರಯರಿಬ್ಬರ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ 2017 ರಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು ನಂತರ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಮತ್ತು 2002 ರಲ್ಲಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಹತ್ಯೆಗಳು ಸೇರಿದಂತೆ ಎರಡು ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನುನೀಡಲಾಗಿದೆ.
ಹರಿಯಾಣ ಉತ್ತಮ ನಡತೆ ಕೈದಿಗಳ (ತಾತ್ಕಾಲಿಕ ಬಿಡುಗಡೆ) ಕಾಯಿದೆ, 2022 ರ ಪ್ರಕಾರ, ಶಿಕ್ಷೆಗೊಳಗಾದ ಕೈದಿಗಳಿಗೆ ನಿಯಮಿತ ಪೆರೋಲ್ ನೀಡಬಹುದು. ಆದಾಗ್ಯೂ, ಬಹು ಕೊಲೆಗಳ ಅಪರಾಧಿ ಅಥವಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ ಶಿಕ್ಷೆಗೊಳಗಾದ ಕೈದಿಗಳು ಪೆರೋಲ್‌ಗೆ ಅರ್ಹರಾಗಿರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.