![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 24, 2023, 6:13 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಇದರಿಂದ ಎಚ್ಚೆತ್ತಿರುವ ಅಲ್ಲಿನ ಆರೋಗ್ಯ ಸಚಿವ ತಾನಾಜಿ ಸಾವಂತ್ ಸಭೆಯೊಂದನ್ನು ನಡೆಸಿದ್ದಾರೆ. ಅಪಾಯದ ಪ್ರಮಾಣ ಗರಿಷ್ಠವಿರುವ ಪುಣೆ, ಮುಂಬೈ, ಥಾಣೆ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ತಾಕೀತು ಮಾಡಿದ್ದಾರೆ.
ಕೊರೊನಾ ಕಾರ್ಯಪಡೆಯನ್ನೂ ಪುನರ್ರಚನೆ ಮಾಡಿದ್ದಾರೆ. ಇದು ಆ ರಾಜ್ಯ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದರ ಲಕ್ಷಣವಾಗಿದೆ. “ಪ್ರತಿನಿತ್ಯ ನಡೆಸುವ ಕೊರೊನಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಕೊರೊನಾ ಪರೀಕ್ಷೆ ಸಂಬಂಧ ಇತ್ತೀಚೆಗೆ ನಡೆಸಿರುವ ಪರೀಕ್ಷಾರ್ಥ ಪ್ರದರ್ಶನದಲ್ಲಿ ಹಲವು ದೋಷಗಳು ಕಂಡುಬಂದಿವೆ. ಅವನ್ನೆಲ್ಲ ಸರಿಪಡಿಸಿಕೊಳ್ಳಬೇಕು. ಮೆಟ್‌ಮಾರ್ಫಿನ್ ಮಾತ್ರೆಗಳಿಂದ ಕೊರೊನಾ ರೋಗಿಗಳಿಗೆ ಲಾಭವಿದೆ. ಆದರೆ ಅದನ್ನು ಶಿಷ್ಟಾಚಾರ ಪಟ್ಟಿಯಲ್ಲಿ ಸೇರಿಸಿಲ್ಲ’ ಎಂದು ಡಾ.ಗಂಗಾ ಖೇಡ್ಕರ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಗಮನ ಹರಿಸಿ ಎಂದು ಸಚಿವ ತಾನಾಜಿ ಸೂಚಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.