ಭೂಮಿ ನುಂಗಲು ಮಾಸ್ಟರ್ ಪ್ಲ್ಯಾನ್:ರಾತ್ರೋ ರಾತ್ರಿ ನಿರ್ಮಾಣವಾಯಿತು ‘ಕೊರೊನಾ ಮಾತಾ’ ದೇವಸ್ಥಾನ
Team Udayavani, Jun 13, 2021, 2:37 PM IST
ಉತ್ತರ ಪ್ರದೇಶ : ಇಡೀ ವಿಶ್ವಕ್ಕೆ ಸಂಕಷ್ಟ ತಂದೊಡ್ಡಿರುವ ಕೋವಿಡ್ ಮಹಾಮಾರಿ ಸೋಂಕು ಹೊಡೆದೊಡಿಸಲು ನಾನಾ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಇಲ್ಲೊಂದು ಉತ್ತರ ಪ್ರದೇಶದಲ್ಲಿ ಕೋವಿಡ್ ಮಾತೆಯ ದೇವಸ್ಥಾನ ನಿರ್ಮಿಸಿ ಪೂಜಿಸಲಾಗಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನ ಶುಕ್ಲುಪುರ್ ಗ್ರಾಮದಲ್ಲಿ ಕೊರೋನಾ ದೇವಿಯ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಕೊರೋನಾಗೆ ದೇವರ ಸ್ವರೂಪ ನೀಡಿದ ಇಲ್ಲಿನ ಮಂದಿ ಕೊರೋನಾ ಮಾತೆಯನ್ನು ಪ್ರತಿಷ್ಟಾಪಿಸಿ, ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು. ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಇಲ್ಲಿನ ಜಿಲ್ಲಾಡಳಿತ ದೇವಾಲಯವನ್ನು ನೆಲಸಮ ಮಾಡಿದೆ.
ದೇವಸ್ಥಾನ ನಿರ್ಮಾಣದ ಹಿಂದಿತ್ತು ಖತರ್ನಾಕ್ ಐಡಿಯಾ :
ಕೊರೊನಾ ಮಾತೆ ಮಂದಿರ ನಿರ್ಮಾಣದ ಹಿಂದೆ ವ್ಯಕ್ತಿಯೊಬ್ಬನ ಸ್ವ ಹಿತಾಸಕ್ತಿ ಇತ್ತು. ಗ್ರಾಮದ ಜನರಿಗೆ ಕೊರೋನಾ ಭಯ ಮೂಡಿಸಿ. ತನ್ನ ವಿರೋಧಿಯ ಭೂಮಿ ಒತ್ತುವರಿ ನಡೆಸಿದ್ದಾರೆ. ಈ ವಿವಾದ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಭೂಮಿ ಒತ್ತುವರಿ ಮಾಡಿಕೊಂಡಿದ್ದ ಜಾಗದಲ್ಲಿನ ದೇವಾಲಯವನ್ನು ಕೆಡವಿದೆ.
ಕಳೆದ ಐದು ದಿನಗಳ ಹಿಂದೆ ಸ್ಥಳೀಯರ ಸಹಾಯದಿಂದ ಲೊಕೇಶ್ ಕುಮಾರ್ ಶ್ರೀವಾತ್ಸವ ಇಲ್ಲಿ ಮಂದಿರ ಕಟ್ಟಿಸಿದ್ದರು. ಕೊರೋನಾ ಮಾತೆಯ ಮೂರ್ತಿಯನ್ನು ಕೂರಿಸಿ , ರಾಧೆ ಶ್ಯಾಮ್ ವರ್ಮ್ ಎಂಬ ಪುರೋಹಿತನನ್ನು ನೇಮಕ ಮಾಡಲಾಗಿತ್ತು. ಇದಾದ ಬಳಿಕ ಜನರು ದೇವರ ಆರಾಧನೆಗೆ ಮುಂದಾದರು.
ನೋಯ್ಡ ಮೂಲಕ ನಾಗೇಶ್ ಕುಮಾರ್ ಶ್ರೀವಾತ್ಸವ್ ಮತ್ತು ಜೈ ಪ್ರಕಾಶ್ ಶ್ರೀವಾತ್ಸವ ಪಾಲುದಾರಿಕೆ ಭೂಮಿಯನ್ನು ಈ ಗ್ರಾಮದಲ್ಲಿ ಹೊಂದಿದ್ದರು. ಅವರು ನೋಯ್ಡಗೆ ಮರಳುತತ್ತಿದ್ದಂತೆ ಈ ದೇವಾಲಯ ನಿರ್ಮಾಣವಾಗಿದೆ. ಭೂಮಿಯನ್ನು ಒತ್ತುವರಿ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ನಾಗೇಶ್ ಪೊಲೀಸರಿಗೆ ದೂರು ನೀಡಿದ್ದರು.
ವಿವಾದಿತ ಜಮೀನಿನಲ್ಲಿ ಏಕಾಏಕಿ ದೇವಾಲಯ ನಿರ್ಮಿಸಿದ ಕಾರಣ ಪೊಲೀಸರು ದೇವಸ್ಥಾನವನ್ನು ಧ್ವಂಸ ಮಾಡಿದ್ದಾರೆ. ಈ ಹಿನ್ನಲೆ ಈಗ ವಿರೋಧಿ ಪಕ್ಷದ ಗುಂಪು ಪೊಲೀಸರ ವಿರುದ್ಧ ಹರಿಹಾಯ್ದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.