ಭ್ರಷ್ಟಾಚಾರ ಆರೋಪ ವಿವರ ಹಂಚಿಕೊಳ್ಳಲಾಗದು: ಪಿಎಂಓ ಸ್ಪಷ್ಟನೆ
Team Udayavani, Nov 21, 2018, 7:22 PM IST
ಹೊಸದಿಲ್ಲಿ: ಕೆಲವು ಕೇಂದ್ರ ಸಚಿವರ ವಿರುದ್ಧ ಬಂದಿರುವ ಭ್ರಷ್ಟಾಚಾರದ ಆರೋಪಗಳ ವಿವರಗಳನ್ನು ಹಂಚಿಕೊಳ್ಳುವುದಕ್ಕೆ ಪ್ರಧಾನಿ ಕಾರ್ಯಾಲಯ ನಿರಾಕರಿಸಿದೆ.
ಇಂತಹ ವಿವರಗಳು ವಸ್ತು-ವ್ಯಕ್ತಿ ಕೇಂದ್ರಿತವಾಗಿದ್ದು ಅವುಗಳ ನಿರ್ವಹಣೆ ಸಂಕೀರ್ಣದ್ದಾಗಿರುತ್ತದೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
ಸಿಬಿಐ ಹಿರಿಯ ಅಧಿಕಾರಿಯೋರ್ವರು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಹರಿಭಾಯಿ ಪಾರ್ಥಿಭಾಯಿ ಚೌಧರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದಿಂದ ಈ ಹೇಳಿಕೆ ಬಂದಿರುವುದು ಗಮನಾರ್ಹವಾಗಿದೆ.
“ಪ್ರಧಾನಿ ಕಾರ್ಯಾಲಯ ಕಾಲಕಾಲಕ್ಕೆ ಕೇಂದ್ರದ ಹಲವು ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರದ ದೂರುಗಳನ್ನು ಸ್ವೀಕರಿಸುತ್ತದೆ; ಅವೆಲ್ಲವುಗಳ ವಿವರಗಳನ್ನು ಹಂಚಿಕೊಳ್ಳುವುದು ಕಾರ್ಯಸಾಧುವಲ್ಲ” ಎಂದು ಪ್ರಧಾನಿ ಕಾರ್ಯಾಲಯ ಆರ್‌ಟಿಐ ಗೆ ಉತ್ತರವಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.