ಹೈಕೋರ್ಟ್ನಲ್ಲಿ ವಿವಾದ ಅಂತ್ಯ:ಮರೀನಾ ಬೀಚ್ನಲ್ಲೇ ಕರುಣಾ ಸಮಾಧಿ
Team Udayavani, Aug 8, 2018, 11:01 AM IST
ಚೆನ್ನೈ: ಮರೀನಾ ಬೀಚ್ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ.
ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಡಿಎಂಕೆ ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಮರೀನಾ ಬೀಚ್ನಲ್ಲಿ ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಐವರೂ ಅರ್ಜಿಗಳನ್ನು ವಾಪಸ್ ಪಡೆದಿದ್ದರು.
ಈ ವಿವಾದದ ಕುರಿತು ಮಂಗಳವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆಯಿತಾದರೂ ಯಾವುದೇ ಆದೇಶ ಹೊರಬೀಳದೆ ಬುಧವಾರ ಬೆಳಗ್ಗೆ 8 ಗಂಟೆಗೆ ವಿಚಾರಣೆ ಮುಂದೂಡಿಕೆಯಾಗಿತ್ತು.
ಕರ್ನಾಟಕ ಮೂಲದ ಹಂಗಾಮಿ ಸಿಜೆ ಹುಲುವಾಡಿ ಜಿ.ರಮೇಶ್ ನಿವಾಸದಲ್ಲಿ ರಾತ್ರಿ ವಿಚಾರಣೆ ನಡೆಯಿತು. ಹೈಕೋರ್ಟ್ನಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಅರ್ಜಿ ವಿಚಾರಣೆ ಸುಧೀರ್ಘ 2 ಗಂಟೆಗಳ ಬಳಿಕ ತೀರ್ಪು ಹೊರ ಬಂದಿದೆ.
ತೀವ್ರ ಆಕ್ರೋಶ ಗೊಂಡಿದ್ದ ಡಿಎಂಕೆ ಕಾರ್ಯಕರ್ತರು !
ಮರೀನಾ ಬೀಚ್ನಲ್ಲಿ ಅವಕಾಶ ನೀಡದ ಸರ್ಕಾರದ ವಿರುದ್ಧ ಡಿಎಂಕೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು. ಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿದ್ದರೆ ಹಿಂಸಾಚಾರ ನಡೆಯುವ ಸಾಧ್ಯತೆಗಳು ಇದ್ದವು. ಆದರೆ ಕೋರ್ಟ್ ನೀಡಿರುವ ತೀರ್ಪು ಡಿಎಂಕೆ ಕಾರ್ಯಕರ್ತರಿಗೆ ನೋವಿನಲ್ಲು ಖುಷಿ ತಂದಿದೆ.
ವ್ಯಾಪಕ ಕಟ್ಟೆಚ್ಚರ
ಮರೀನಾ ಬೀಚ್ನಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನು ನಿಯೋಜಿಸಿ, ಸಮಾಧಿ ಕಾರ್ಯಕ್ಕೆ ಬೇಕಾಗಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.