ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಪಡೆಯಲು ಅವಕಾಶ
Team Udayavani, Apr 8, 2022, 4:23 PM IST
ಹೊಸದಿಲ್ಲಿ: ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರು ಏಪ್ರಿಲ್ 10ರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮೊದಲ ಮತ್ತು ಎರಡನೇ ಡೋಸ್‌ಗಳಿಗೆ ಸರ್ಕಾರಿ ಲಸಿಕೆ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ ಲಸಿಕೆ ಕಾರ್ಯಕ್ರಮ ಮುಂದುವರಿಯುತ್ತದೆ ಎಂದು ಕೇಂದ್ರ ತಿಳಿಸಿದೆ.
ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳ ಅವಧಿ ಪೂರೈಸಿದ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ. ಈ ವ್ಯವಸ್ಥೆಯು ರವಿವಾರದಿಂದ ಎಲ್ಲಾ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಭ್ಯವಿರುತ್ತದೆ.
ದೇಶದಲ್ಲಿ ಇದುವರೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60+ ಜನಸಂಖ್ಯೆಯ ಗುಂಪಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ:ಮೆಟ್ರೋದಲ್ಲೇ “ಬೆಂಗಳೂರು ರೌಂಡ್ಸ್’ಗೆ ಚಿಂತನೆ; ಪ್ರವಾಸಿ ತಾಣಗಳ ದರ್ಶನ
ದೇಶದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಇದುವರೆಗೆ ಶೇ.96 ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ. ಶೇ.83ರಷ್ಟು ಮಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.
Precaution doses to be now available to 18+ population group from 10th April at private vaccination centres: Ministry of Health
— ANI (@ANI) April 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.