2 ವಾರಗಳ ಬಳಿಕವೂ ಕೋವಿಡ್ 19 ಕಾಣಿಸಿಕೊಳ್ಳಬಹುದು
Team Udayavani, Mar 22, 2020, 11:15 PM IST
ದಿಲ್ಲಿ: ಕೋವಿಡ್ 19 ಲಕ್ಷಣಗಳು ಕೇವಲ 14 ದಿನಗಳಲ್ಲೇ ಕಾಣಿಸಿಕೊಳ್ಳಬೇಕೆಂದೇನಿಲ್ಲ ಎರಡು ವಾರಗಳ ಬಳಿಕವೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯೊಂದು ಹೇಳಿದೆ. ಎಲ್ಲರಲ್ಲೂ ಒಂದೇ ರೀತಿಯಾಗಿ ಕೋವಿಡ್ 19 ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಕೆಲವರಲ್ಲಿ 2 3 ದಿನಕ್ಕೆ ಕಾಣಿಸಿಕೊಳ್ಳಬಹುದಾಗಿದ್ದು ಮತ್ತೂ ಕೆಲವರಲ್ಲಿ ವಾರದ ಬಳಿಕ ಕಾಣಿಸಿಕೊಳ್ಳಬಹುದು ಎಂದು ಹೇಳಿದೆ.
ಎರಡು ವಾರಗಳ ಬಳಿಕವೂ ಕೋವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಬಹುದಾಗಿದೆ. ಸೋಂಕಿತರ ಸಂಪರ್ಕಕ್ಕೆ ಹೋದವರಿಗೆ 14 ದಿನಗಳ ಕಾಲ ಪ್ರತ್ಯೇಕವಾಗಿರಲು ಎಂದು ಸೂಚಿಸಲಾಗಿದೆ. ಏಕೆಮದರೆ ಕೋವಿಡ್ 19 ಸೋಂಕು ತಗುಲಿದ್ದರೆ ಆ ಎರಡು ವಾರಗಳೊಳಗೆ ಯಾವುದಾದರೂ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಸೋಂಕು ನಿಯಂತ್ರಣ ಮತ್ತು ಆಸ್ಪತ್ರೆ ಸಾಂಕ್ರಾಮಿಕ ರೋಗ ಶಾಸ್ತ್ರದ ಜರ್ನಲ್ ನಲ್ಲಿ ಈ ಅಧ್ಯಯನದ ವರದಿಯನ್ನು ಪ್ರಕಟಿಸಲಾಗಿದೆ. ಜನವರಿ 20ರಿಂದ ಫೆಬ್ರವರಿ 12ರ ವರೆಗೆ ಒಟ್ಟು 175 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ಕೆಲವರಿಗೆ 14 ದಿನಗಳ ಗೃಹ ಬಂಧನದಲ್ಲಿಡಲಾಗಿತ್ತು. ಅಷ್ಟರಲ್ಲೇ ಲಕ್ಷಣಗಳು ಕಂಡು ಬಂದಿತ್ತು. ಆದರೆ ಇನ್ನೂ ಕೆಲವರಿಗೆ ಈ ಅವಧಿಯಲ್ಲಿ ಲಕ್ಷಣಗಳು ಪತ್ತೆಯಾಗಿರಲಿಲ್ಲ.
ಈ ಅಧ್ಯಯನದ ಸಂದರ್ಭದಲ್ಲಿ ಮಧ್ಯವಯಸ್ಕರನ್ನೇ ಹೆಚ್ಚಾಗಿ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಸುಮಾರು ಶೇ.59.8 ಮಂದಿ ದುಬಾೖ ಪ್ರಾಂತ್ಯಕ್ಕೆ ಪ್ರಯಾಣಿಸಿದ್ದರು. ಉಳಿದವರು ಹೀಗೆ ಸೋಂಕಿತರ ಸಂಪರ್ಕಕ್ಕೆ ಹೋಗಿ ವೈರಸ್ ತಗುಲಿಸಿಕೊಂಡವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.