5 ದಿನಗಳಲ್ಲಿ ಸೋಂಕಿತರ ಸಂಖ್ಯೆ 1ಮಿಲಿಯನ್ ತಲುಪಲಿದೆ; ಸಾವಿನ ಪ್ರಮಾಣ ಕೂಡ ಏರಿಕೆ: WHO ಕಳವಳ
Team Udayavani, Apr 2, 2020, 8:50 AM IST
ನ್ಯೂಯಾರ್ಕ್: ಜಗತ್ತಿನಾದ್ಯಂತ ಕೋವಿಡ್-19 ಸೋಂಕು ಕ್ಷಿಪ್ರ ಗತಿಯಲ್ಲಿ ಪಸರಿಸುತ್ತಿದ್ದು ಇನ್ನು 5 ದಿನಗಳಲ್ಲಿ 1 ಮಿಲಿಯನ್ ಜನರು ಸೋಂಕು ಪೀಡಿತರಾಗಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ‍್ತೆ ಕಳವಳ ವ್ಯಕ್ತಪಡಿಸಿದೆ.
ಕಳೆದ 5 ವಾರಗಳಿಂದ ಸೋಂಕಿತರ ಪ್ರಮಾಣದಲ್ಲಿ ಘಾತಕ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಪ್ರಮಾಣ ಕೂಡ ದ್ವಿಗುಣಗೊಂಡಿದೆ. ಇದೇ ರೀತಿ ಮುಂದುವರೆದರೆ ಮುಂದಿನ 5 ದಿನಗಳಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪಲಿದ್ದು, 50,000ಕ್ಕಿಂತ ಹೆಚ್ಚು ಜನರು ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ‍್ಥ ಟೆಡ್ರೋಸ್ ಅಧಾನೋಮ್ ಕಳವಳ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಮಾರ್ಚ್ 31 ಮತ್ತು ಏಪ್ರಿಲ್ 1 ರ ನಡುವೆ 437 ಕೋವಿಡ್ -19 ಪ್ರಕರಣ ದಾಖಲಾಗಿದೆ. ಆ ಮೂಲಕ ಒಟ್ಟಾರೆ ಸೋಂಕು ಪೀಡಿತರ ಪ್ರಮಾಣ 1,834ಕ್ಕೆ ಏರಿಕೆಯಾಗಿದೆ. ಇದರಲ್ಲಿ 1,649 ಜನರಿಗೆ ಸೋಂಕು ದೃಢಪಟ್ಟಿದ್ದು, 42 ಜನರು ಸಾವನ್ನಪ್ಪಿದ‍್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಫ್ರಾನ್ಸ್ ನಲ್ಲಿ ಈ ಸೋಂಕಿನಿಂದ ಬುಧವಾರ ಏಕಾಏಕಿ 509 ಜನರು ಮೃತರಾಗಿದ್ದಾರೆ. ಇಲ್ಲಿ ಸೋಂಕಿತರ ಪ್ರಮಾಣ ಕೂಡ 4,032ಕ್ಕೆ ಏರಿಕೆಯಾಗಿದೆ.
ಅಮೆರಿಕಾದಲ್ಲಿ 6 ವಾರಗಳ ಮಗುವೊಂದು ಈ ಮಹಾಮಾರಿ ಸೋಂಕಿಗೆ ಮೃತಪಟ್ಟಿದ್ದು, ಈ ಸಾಂಕ್ರಮಿಕ ರೋಗಕ್ಕೆ ಬಲಿಯಾದ ಅತೀ ಕಿರಿಯ ವ್ಯಕ್ತಿ ಎನಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.