ಕೋವಿಡ್-19: ಭಾರತದಲ್ಲಿ ಒಂದೇ ದಿನ 100 ಮಂದಿಗೆ ಸೋಂಕು ದೃಢ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
Team Udayavani, Mar 24, 2020, 8:53 AM IST
ನವದೆಹಲಿ: ಮಹಾಮಾರಿ ಕೋವಿಡ್-19 ವೈರಸ್ ತಡೆಗಟ್ಟಲು ಭಾರತದಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಸರ್ಕಾರ ಹೊರಡಿಸಿದೆ. ದುರಂತವೆಂದರೇ ಸೋಮವಾರ ಒಂದೇ ದಿನ 100 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಭಾರತದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 499ಕ್ಕೆ ಏರಿಕೆಯಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಮಾತ್ರವಲ್ಲದೆ ಮಾರಾಣಾಂತಿಕ ವೈರಸ್ ಗೆ ಈಗಾಗಲೇ 10 ಜನರು ಮೃತಪಟ್ಟಿದ್ದಾರೆ, ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ ಮುಂತಾದ ರಾಜ್ಯಗಳು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಹೊರಡಿಸಿದೆ. ಅದರ ಜೊತೆಗೆ ಕೆಲವು ಕೇಂದ್ರಾಡಳಿತ ಪ್ರದೇಶಗಳು ಮತ್ತು 30 ರಾಜ್ಯಗಳಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
12 ಖಾಸಗಿ ಕೋವಿಡ್-19 ಸೋಂಕು ಪತ್ತೆ ಪ್ರಯೋಗಾಲಯಕ್ಕೆ ಕೂಡ ಕೇಂದ್ರ ಸರ್ಕಾರ ಮಾನ್ಯತೆ ನೀಡಿದೆ.
ಮರಣ ಪ್ರಮಾಣ 10ಕ್ಕೆ ಏರಿಕೆ: ಸೋಮವಾರ ಒಂದೇ ದಿನ ಭಾರತದಲ್ಲಿ ಮೂವರು ಮೃತರಾಗಿದ್ದರು. ಆ ಮೂಲಕ ಸಾವನ್ನಪ್ಪಿದವರ ಪ್ರಮಾಣ 10ಕ್ಕೆ ಏರಿಕೆಯಾಗಿದೆ. ಇಟಲಿಯಿಂದ ಇತ್ತೀಚಿಗಷ್ಟೇ ಹಿಂದಿರುಗಿದ್ದ 55 ವರ್ಷದ ವ್ಯಕ್ತಿ ಕೊಲ್ಕತ್ತಾದಲ್ಲಿ ಈ ಸೋಂಕುವಿನಿಂದ ಮೃತರಾಗಿದ್ದರು.
ಹಿಮಾಚಲ ಪ್ರದೇಶದಲ್ಲೂ ಈ ಸೊಂಕಿನಿಂದ ಮೊದಲ ಸಾವು ಸಂಭವಿಸಿದ್ದು, ಈ 69 ವರ್ಷದ ವ್ಯಕ್ತಿ ಅಮೆರಿಕಾದಿಂದ ಹಿಂದಿರುಗಿದ್ದರು. ಮುಂಬೈಯ ಓರ್ವ ವ್ಯಕ್ತಿಯು ಮೃತಪಟ್ಟಿದ್ದು ಇವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ವ್ಯಕ್ತಿಗೆ ಮೊದಲು ನೆಗೆಟಿವ್ ಪರೀಕ್ಷಾ ವರದಿ ಬಂದಿದ್ದು ಕೆಲವು ದಿನಗಳ ನಂತರದಲ್ಲಿ ಪಾಸಿಟಿವ್ ಆಗಿ ಬದಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.