ಕೋವಿಡ್ 19 : ಹರಿಯಾಣದಲ್ಲಿ ಮೇ 31 ರ ತನಕ ಲಾಕ್ ಡೌನ್ ವಿಸ್ತರಣೆ
Team Udayavani, May 23, 2021, 7:57 PM IST
ಪ್ರಾತಿನಿಧಿಕ ಚಿತ್ರ
ಹರಿಯಾಣ : ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೇ 31 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ನನ್ನು ಒಂದು ವಾರ ವಿಸ್ತರಿಸಲಾಗಿದೆ ಎಂದು ಹರಿಯಾಣ ಸರ್ಕಾರ ಇಂದು(ಭಾನುವಾರ, ಮೇ 23) ತಿಳಿಸಿದೆ.
“ರಾಜ್ಯದಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ಪ್ರಮಾಣ ಕಡಿಮೆಯಾಗಿದ್ದರೂ, ಮೇ 31 ರ ಬೆಳಿಗ್ಗೆ 5 ಗಂಟೆಯವರೆಗೆ ಒಂದು ವಾರ ವಿಸ್ತರಿಸಲಾಗಿದೆ” ಎಂದು ಅಧಿಕೃತ ಆದೇಶ ಹೊರಡಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.
ಇದನ್ನೂ ಓದಿ : ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಮೂವರ ಬಂಧನ, 5.35 ಕೆಜಿ ತೂಕದ ವಾಂತಿ ವಶ
ಆದಾಗ್ಯೂ, ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು, ರಾತ್ರಿ ಕರ್ಫೂ ಜಾರಿಯಲ್ಲಿರುವ ಕಾರಣದಿಂದ ಹಗಲಿನಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದ್ದು, ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಅಂಗಡಿಗಳನ್ನು ಎರಡು ಗುಂಪುಗಳಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ಮಾಲ್ ಗಳನ್ನು ತೆರೆಯುಲು ಅನುಮತಿಸದೇ, ನಿರ್ಬಂಧವನ್ನು ಮುಂದುವರಿಸಿದೆ.
ಮೇ 17 ರಿಂದ ಜಾರಿಗೆ ಬರುವಂತೆ ಮೇ 24 ರವರೆಗೆ ಹರಿಯಾಣದಲ್ಲಿ ಒಂದು ವಾರದ ಸಂಪೂರ್ಣ ಲಾಕ್ ಡೌನ್ ಅನ್ನು ಈಗಾಗಲೇ ವಿಧಿಸಲಾಗಿತ್ತು. ಆದರೇ, ಈ ಲಾಕ್ ಡೌನ್ ನನ್ನು ಈಗ ಮತ್ತೆ ಒಂದು ವಾರಗಳ ಕಾಲ ಕೆಲವು ನಿರ್ಬಂಧಗಳ ಸಡಿಲಗೊಳಿಸುವುದರೊಂದಿಗೆ ವಿಸ್ತರಣೆ ಮಾಡಿದೆ.
ಇದನ್ನೂ ಓದಿ : ಮೋದಿ ಕಣ್ಣೀರಾದ ಕ್ಷಣ : ಪ್ರಧಾನಿಗೆ ಆಸ್ಕರ್ ಕೊಡಬೇಕೆಂದು ವ್ಯಂಗ್ಯವಾಡಿದ ನಿರ್ದೇಶಕ ವರ್ಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.