ಕೋವಿಡ್ 19 : ಸಂಕಷ್ಟದ ಸುಳಿಯಲ್ಲಿ ಪಾಕಿಸ್ಥಾನ


Team Udayavani, Mar 19, 2020, 2:11 AM IST

ಕೋವಿಡ್ 19 : ಸಂಕಷ್ಟದ ಸುಳಿಯಲ್ಲಿ ಪಾಕಿಸ್ಥಾನ

ದಿಲ್ಲಿ: ಕೋವಿಡ್ 19 ವೈರಸ್‌ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇರಾನ್‌, ಚೀನ, ಇಟಲಿ ಬಳಿಕ ಪಾಕಿಸ್ಥಾನದಲ್ಲಿ ಹೆಚ್ಚು ಪ್ರಕರಣ ಕಂಡುಬಂದಿದೆ. ಪಾಕಿಸ್ಥಾನದಲ್ಲಿ ಒಂದೇ ದಿನದಲ್ಲಿ ವೈರಸ್‌ ಸೋಂಕಿತರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಅಲ್ಲದೆ ಕರೊನಾ ವೈರಸ್‌ನಿಂದ ಬಳಲುತ್ತಿರುವ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ.

ತಮ್ಮ ದೇಶವು ದಕ್ಷಿಣ ಏಷ್ಯಾದ ವುಹಾನ್‌ ಆಗುವ ಹಾದಿಯಲ್ಲಿದೆ ಎಂಬುದನ್ನು ಪಾಕಿಸ್ಥಾನದೊಳಗಿನ ತಜ್ಞರೇ ಹೇಳಿಕೊಳ್ಳುತ್ತಿದ್ದಾರೆ.

ಪಾಕಿಸ್ಥಾನದಲ್ಲಿ ಕರೋನಾ ವೈರಸ್‌ ಅನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಇದೇ ಕಾರಣಕ್ಕಾಗಿ, ಸಿಂಧ್‌ ಪ್ರಾಂತ್ಯದಲ್ಲಿ ಒಂದು ದಿನದೊಳಗೆ 115 ಕರೋನಾ ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ.

ಪಾಕಿಸ್ಥಾನದಲ್ಲಿ ಕರೋನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಚೀನ, ಇಟಲಿ ಮತ್ತು ಇರಾನ್‌ ಹೊರತುಪಡಿಸಿ ದೇಶದಲ್ಲೂ ಈ ಮಟ್ಟಿಗಿನ ಹೆಚ್ಚಳ ಕಂಡು ಬಂದಿಲ್ಲ ಎಂಬುದು ಪಾಕಿಸ್ಥಾನದ ತಲ್ಲಣಕ್ಕೆ ಕಾರಣ. ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಈಗಾಗಲೇ ಕರೊನಾ ವಿರುದ್ಧ ಹೋರಾಡಲು ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಸಹಕಾರಕ್ಕಾಗಿ ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ನಾವು ಕಷ್ಟದ ಸಮಯಗಳನ್ನು ಎದುರಿಸುತ್ತಿದ್ದೇವೆ ಎಂದಿರುವ ಇಮ್ರಾನ್‌, ನಾವು ಅಮೆರಿಕ ಮತ್ತು ಯುರೋಪಿನಂತೆ ಶ್ರೀಮಂತರಲ್ಲ. ಒಂದು ಕಡೆ ಕರೋನಾ ವೈರಸ್‌ ವಿರುದ್ಧ ಹೋರಾಡಲು ನಿಂತರೆ, ಇನ್ನೊಂದೆಡೆ ನಮ್ಮ ಜನರು ಹಸಿವಿನಿಂದ ಸಾಯಬೇಕಾಗುತ್ತದೆ ಎಂದು ಇಮ್ರಾನ್‌ ಹೇಳಿದ್ದಾರೆ.

ಕರೋನಾವನ್ನು ತಡೆಯುವ ಯಾವುದೇ ಯೋಜನೆಯನ್ನು ಪಾಕಿಸ್ಥಾನ ಆಡಳಿತ ಹೊಂದಿಲ್ಲ. ಇರಾನ್ನಿಂದ ಬಲೂಚಿಸ್ಥಾನ‌ಕ್ಕೆ ಬರುವ ಜನರಲ್ಲಿ ಕರೋನದ ಲಕ್ಷಣಗಳಿದ್ದರೂ ಯಾವುದೇ ಮುಂದುವರಿದ ಕ್ರಮ ಕೈಗೊಳ್ಳಲಾಗಿಲ್ಲ.

ಪಾಕಿಸ್ಥಾನವು ಕರೋನಾ ಪರೀಕ್ಷೆಗೆ ಯಾವುದೇ ಸೌಲಭ್ಯವನ್ನು ಹೊಂದಿಲ್ಲ ಅಥವಾ ಆಸ್ಪತ್ರೆಗಳಲ್ಲಿ ಕರೋನಾ ರೋಗಿಗಳನ್ನು ನಿಭಾಯಿಸುವ ಸಿದ್ಧತೆಗಳನ್ನು ಹೊಂದಿಲ್ಲ ಎಂದು ಹೇಳಲಾಗುತ್ತಿದೆ. ಪಾಕಿಸ್ಥಾನದೊಳಗೆ ಇನ್ನೂ 1,700 ಶಂಕಿತ ಕರೋನಾ ರೋಗಿಗಳು ಕಾಣೆಯಾಗಿದ್ದಾರೆ. ಅವರು ಎಲ್ಲಿಗೆ ತಲುಪಿದರು ಎಂಬ ಬಗ್ಗೆ ಸರಕಾರಕ್ಕೆ ಯಾವುದೇ ಮಾಹಿತಿ ಇಲ್ಲ. ಇದು ಸಹಜವಾಗಿ ನೆರೆಯ ರಾಷ್ಟ್ರಗಳ ಆತಂಕಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Kulai: ನೀರುಪಾಲಾದವರ ಶವ ಹಸ್ತಾಂತರ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kulai: ನೀರುಪಾಲಾದವರ ಶವ ಹಸ್ತಾಂತರ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.