ಕೇರಳ: ಕೋವಿಡ್ ಸೋಂಕಿತೆಯ ಮೇಲೆ ಆ್ಯಂಬುಲೆನ್ಸ್ ಚಾಲಕನಿಂದ ಅತ್ಯಾಚಾರ, ಘಟನೆಗೆ ವ್ಯಾಪಕ ಖಂಡನೆ!
Team Udayavani, Sep 6, 2020, 2:18 PM IST
ಕೇರಳ: ಕೋವಿಡ್ ಸೋಂಕಿಗೆ ತುತ್ತಾದ ಯುವತಿಯ ಮೇಲೆ ಆ್ಯಂಬುಲೆನ್ಸ್ ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಶನಿವಾರ ರಾತ್ರಿ ಪಟ್ಟನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅತ್ಯಾಚಾರವೆಸಗಿದ ಒಂದು ಗಂಟೆಯಲ್ಲಿ ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಸರ್ಕಾರದ ಮಾರ್ಗಸೂಚಿ ಪ್ರಕಾರ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಾಗಬೇಕಿತ್ತು. ಹೀಗಾಗಿ ಮಧ್ಯರಾತ್ರಿಯಲ್ಲಿ ಆ್ಯಂಬುಲೆನ್ಸ್ ಮಹಿಳೆಯರ ಮನೆಗೆ ಬಂದಿತ್ತು.
ಅದಾಗ್ಯೂ ಒಬ್ಬ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೊಬ್ಬ ಮಹಿಳೆಯನ್ನು ಬೆಡ್ ಕೊರೆತೆಯಿದ್ದ ಕಾರಣ ಬೇರೊಂದು ಆಸ್ಪತ್ರೆಗೆ ಕರೆದೊಯ್ಯುವಂತೆ ಆ್ಯಂಬುಲೆನ್ಸ್ ಚಾಲಕನಿಗೆ ಸೂಚನೆ ನೀಡಲಾಗಿತ್ತು.
ಆದರೇ ಆಂಬ್ಯುಲೆನ್ಸ್ ಚಾಲಕ ನಿರ್ಜನ ಸ್ಥಳದಲ್ಲಿ ವಾಹನ ನಿಲ್ಲಿಸಿ 22 ವರ್ಷದ ರೋಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಾತ್ರವಲ್ಲದೆ ಯಾರಿಗಾದರೂ ತಿಳಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾನೆ. ಆಸ್ಪತ್ರೆಗೆ ದಾಖಲಾದ ಕೂಡಲೇ ಯುವತಿಯು ಘಟನೆಯನ್ನು ವೈದ್ಯರ ಗಮನಕ್ಕೆ ತಂದಿದ್ದಾಳೆ.
ವೈದ್ಯಕೀಯ ಪರೀಕ್ಷೆಯಲ್ಲೂ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದ್ದು, ಅತ್ಯಾಚಾರ ಎಸಗಿದಾತನ್ನು ಕೂಡಲೇ ಬಂಧಿಸಲಾಗಿದೆ. ಈತ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆಯತ್ನವನ್ನೂ ಕೂಡ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಗ್ಯ ಅಧಿಕಾರಿಗಳು ಆ್ಯಂಬುಲೆನ್ಸ್ ಚಾಲಕನನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದು, ಅದಾಗ್ಯೂ ಆತನಿಗೆ ಹೇಗೆ ಕೆಲಸ ನೀಡಲಾಗಿದೆ ಎಂಬುದನ್ನು ತನಿಖೆ ನಡೆಸಲಾಗುವುದು ಎಂದಿದ್ದಾರೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಕನಿಷ್ಠ ಇಬ್ಬರು ವೈದ್ಯಕೀಯ ಸಿಬ್ಬಂದಿಗಳಿರಬೇಕು ಹಾಗೂ ಮಹಿಳಾ ರೋಗಿಗಳಾಗಿದ್ದರೆ ವಿಶೇಷ ಕಾಳಜಿ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿತ್ತು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮರ್ಪಕ ತನಿಖೆಗೊಳಪಡಿಸಲಾಗುವುದು ಎಂದು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.