ಸ್ಪುಟ್ನಿಕ್ ವಿ ಲಸಿಕೆ ಉತ್ಪಾದಿಸಲು ಪರವಾನಿಗೆಗಾಗಿ ಅರ್ಜಿ ಸಲ್ಲಸಿದ ಎಸ್ಐಐ
Team Udayavani, Jun 3, 2021, 3:24 PM IST
ನವ ದೆಹಲಿ : ದೇಶದ ಅತ್ಯಂತ ದೊಡ್ಡ ಲಸಿಕಾ ಉತ್ಪಾದನಾ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ರಷ್ಯಾ ಮೂಲದ ಸ್ಪುಟ್ನಿಕ್ ವಿ ಕೋವಿಡ್ -19 ಲಸಿಕೆ ಉತ್ಪಾದಿಸುವ ಉದ್ದೇಶದಿಂದ ಕೇಂದ್ರ ಔಷಧಿಯ ನಿಯಂತ್ರಕ ಮಂಡಳಿಗೆ ಪರವಾನಗಿಗಾಗಿ ಅರ್ಜಿ ಸಲ್ಲಿಸಿದೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಈಗಾಗಲೆ ಆ್ಯಂಟಿ ಕೋವಿಡ್ ಲಸಿಕೆಗಳಾದ ಅಸ್ಟ್ರಾಜೆನೆಕಾ ಪಿ ಎಲ್ ಸಿ ಮತ್ತು ನೊವಾವಾಕ್ಸ್ ಲಸಿಕೆಗಳನ್ನು ತಯಾರಿಸುತ್ತಿದ್ದು, ಈಗ ರಷ್ಯಾ ಮೂಲದ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಮಾಡುವುದಕ್ಕೆ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದೆ.
ಇದನ್ನೂ ಓದಿ : ಚಿಂಚೋಳಿ: ಟಂ -ಟಂ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಇನ್ನು, ಜೂನ್ ನಿಂದ, ಸೀರಮ್ ಸಂಸ್ಥೆ ತಿಂಗಳಿಗೆ 100 ಮಿಲಿಯನ್ ಕೋವಿಶೀಲ್ಡ್ ಲಸಿಕೆಗಳನ್ನು ಉತ್ಪಾದಿಸುವ ನಿರೀಕ್ಷೆ ಇದ್ದು, ಏತನ್ಮಧ್ಯೆ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನೊವಾವಾಕ್ಸ್ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಯುನೈಟೆಡ್ ಸ್ಟೇಟ್ಸ್ನಲ್ಲಿ ಎಫ್ ಡಿ ಎ ಅನುಮೋದನೆಗಾಗಿ ಕಾಯುತ್ತಿದೆ ಎಂದು ವರದಿಯಾಗಿದೆ.
ಭಾರತವು ಈಗಾಗಲೇ ರಷ್ಯಾದಿಂದ ಸುಮಾರು 3 ಮಿಲಿಯನ್ ಡೋಸ್ ಸ್ಪುಟ್ನಿಕ್ ವಿ ಲಸಿಕೆಯನ್ನು ಪಡೆದಿದ್ದು, ಈವರೆಗೆ ಭಾರತಕ್ಕೆ ಆಮದು ಆದ ಅತ್ಯಂತ ದೊಡ್ಡ ಪ್ರಮಾಣದ ಲಸಿಕೆಯ ಸಾಗಣೆಯಾಗಿದೆ.
ಸ್ಪುಟ್ನಿಕ ವಿ ಲಸಿಕೆಯು ರಷ್ಯಾದಿಂದ ವಿಶೇಷವಾಗಿ ಚಾರ್ಟರ್ಡ್ ಸರಕು ಸಾಗಣೆ ಆರ್.ಯು -9450 ನ ಮೂಲಕ ಹೈದರಾಬಾದ್ ವಿಮಾನ ನಿಲ್ದಾಣವನ್ನು ಜೂನ್ 1ರ ಮಧ್ಯಾಹ್ನ 03.43 ಹೊತ್ತಿಗೆ ಬಂದು ತಲುಪಿದೆ. ಒಟ್ಟು 56.6 ಟನ್ ಸ್ಪಟ್ನಿಕ್ ವಿ ಲಸಿಕೆಗಳು ರಷ್ಯಾದಿಂದ ಹೈದರಾಬಾದ್ ಏರ್ ಕಾರ್ಗೋ ವಿಮಾನ ನಿಲ್ದಾಣಕ್ಕೆ ಬಂದಿದೆ.
ಇದನ್ನೂ ಓದಿ : ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ,ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತದೆ: ರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.