ಕೋವಿಡ್ ದೃಢಪಟ್ಟವರ ವಂಶವಾಹಿ ಪರೀಕ್ಷೆ ನಡೆಸಿ; ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಚೀನದಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಈ ಕ್ರಮ
Team Udayavani, Dec 21, 2022, 7:15 AM IST
ನವದೆಹಲಿ: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕು ದೃಢಪಟ್ಟವರ ವಂಶವಾಹಿ ಪರೀಕ್ಷೆ ನಡೆಸಬೇಕು. ಜತೆಗೆ ಹೊಸತಾಗಿ ಗೋಚರವಾಗುವ ವೈರಸ್ನ ರೂಪಾಂತರಿಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಲ್ಲ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಅಮೆರಿಕ, ಚೀನ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.
ಸೋಂಕು ಪತ್ತೆ, ನಿಗಾ, ಚಿಕಿತ್ಸೆ ಮತ್ತು ಲಸಿಕೆ ಹಾಕುವುದು ಹೀಗೆ ಐದು ಹಂತದ ನಿಗಾ ಕ್ರಮಗಳನ್ನು ದೇಶಾದ್ಯಂತ ಕಟ್ಟೆಚ್ಚರದಿಂದ ಪಾಲಿಸಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಾರ್ವಜನಿಕವಾಗಿ ಇನ್ನೂ ಕೊರೊನಾ ದೂರವಾಗಿಲ್ಲ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ನೇತೃತ್ವದಲ್ಲಿ ಸಭೆ ಬುಧವಾರ ನವದೆಹಲಿಯಲ್ಲಿ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.