ಕೋವಿಡ್-19 ಭೀತಿ: ಅಂತಿಮ ಪರೀಕ್ಷೆ ಇಲ್ಲದೆ 1ರಿಂದ 8ನೇ ತರಗತಿ ಮಕ್ಕಳಿಗೆ ತೇರ್ಗಡೆ ಭಾಗ್ಯ!
ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿರುವುದಾಗಿ ಉತ್ತರಪ್ರದೇಶದ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Mar 18, 2020, 1:47 PM IST
Representative Image
ಲಕ್ನೋ:ಕೋವಿಡ್ 19 ವೈರಸ್ ಮಹಾಮಾರಿ ಭೀತಿಯ ತಗುಲುವ ಭೀತಿಯ ಹಿನ್ನೆಲೆಯಲ್ಲಿ ಅಂತಿಮ ಪರೀಕ್ಷೆ ನಡೆಸದೇ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿರುವುದಾಗಿ ಉತ್ತರಪ್ರದೇಶದ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಶಾಲೆಯ ಪರೀಕ್ಷೆಗಳನ್ನು ಮಾರ್ಚ್ 23ರಿಂದ 28ರವರೆಗೆ ಪರೀಕ್ಷೆಗಳನ್ನು ನಡೆಸಲು ಟೈಮ್ ಟೇಬಲ್ ಸಿದ್ಧಪಡಿಸಲಾಗಿತ್ತು.
ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಒಂದರಿಂದ 8ನೇ ತರಗತಿಯವರೆಗೆ ಅಂತಿಮ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶವನ್ನು ಕಳುಹಿಸಿದೆ. ಏಪ್ರಿಲ್ 2ರವರೆಗೆ ಶಾಲೆಗಳನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರೇಣುಕಾ ಕುಮಾರ್ ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯುಪಿ ಸರ್ಕಾರ ಎಲ್ಲಾ ಶೈಕ್ಷಣ ಸಂಸ್ಥೆಗಳು, ಸಿನಿಮಾ ಹಾಲ್, ಮಲ್ಟಿಪ್ಲೆಕ್ಸ್ ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದಂತೆ ಏಪ್ರಿಲ್ 2ರವರೆಗೆ ನಿರ್ಬಂಧ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.