ಮೂರು ಲಕ್ಷ ದಾಟಿದ ಸಾವಿನ ಸಂಖ್ಯೆ: ದೇಶದಲ್ಲಿ 2.22 ಲಕ್ಷ ಹೊಸ ಸೋಂಕು ಪ್ರಕರಣಗಳು ಪತ್ತೆ
Team Udayavani, May 24, 2021, 10:08 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4454 ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 3,03,720 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ತಮಿಳುನಾಡಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಿದೆ. ತಮಿಳುನಾಡಿನಲ್ಲಿ 35,483 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 26,672, ಕರ್ನಾಟಕದಲ್ಲಿ 25,979 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯದಲ್ಲಿ 25,820 ಪ್ರಕರಣಗಳು ಮತ್ತು ಆಂಧ್ರ ಪ್ರದೇಶದಲ್ಲಿ 18,767 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ.
ಇದನ್ನೂ ಓದಿ:ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರನ್ನು ವಾರಿಯರ್ಸ್ ಎಂದು ಪರಿಗಣಿಸಿ, 50 ಲಕ್ಷ ರೂ ಪರಿಹಾರ ನೀಡಿ
ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ 59.7% ಪ್ರಕರಣಗಳು ಈ ಐದು ರಾಜ್ಯಗಳಲ್ಲಿಯೇ ಪತ್ತೆಯಾಗಿದೆ. ಅದರಲ್ಲೂ ತಮಿಳುನಾಡು 15.96% ಪ್ರಕರಣಗಳಿಗೆ ಸಾಕ್ಷಿಯಾಗಿದೆ.
ಈ 24 ಗಂಟೆ ಅವಧಿಯಲ್ಲಿ 4454 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 1320 ಮಂದಿ ಸೋಂಕಿತರು ಮೃತಪಟ್ಟರೆ, ಕರ್ನಾಟಕದಲ್ಲಿ 624 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.