ಕೋವಿಡ್: ಹೊಸ ಮಾರ್ಗಸೂಚಿ: ರಾತ್ರಿ ಕರ್ಫ್ಯೂ ವಿಧಿಸಲು ರಾಜ್ಯಗಳಿಗೆ ಅವಕಾಶ
ಲಾಕ್‌ಡೌನ್ ಹೇರಲು ಕೇಂದ್ರದ ಒಪ್ಪಿಗೆ ಅಗತ್ಯ; ಡಿ. 1ರಿಂದ 31ರ ವರೆಗೆ ಅನ್ವಯ
Team Udayavani, Nov 26, 2020, 12:49 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಹೊಸ ಅಲೆಗಳು ಕಾಣಿಸಿಕೊಂಡಿರುವ ಹಾಗೂ ಹಲವೆಡೆ ಮತ್ತೂಮ್ಮೆ ನಿರ್ಬಂಧಗಳು ಜಾರಿಯಾಗುತ್ತಿರುವ ನಡುವೆಯೇ ಕೇಂದ್ರ ಸರಕಾರವು ಬುಧವಾರ ಹೊಸ ಮಾರ್ಗ ಸೂಚಿ ಹೊರಡಿಸಿದೆ.
ರಾತ್ರಿ ವೇಳೆ ಕರ್ಫ್ಯೂ
ಹೇರುವ, ನಿಯಮ ಉಲ್ಲಂಘ ನೆಗೆ ದಂಡ ವಿಧಿಸುವ ಅಥವಾ ಇತರ ಕ್ರಮ ಕೈಗೊಳ್ಳುವ ಅವಕಾಶವನ್ನು ರಾಜ್ಯಗಳಿಗೆ ನೀಡಲಾಗಿದೆ. ಡಿ. 1ರಿಂದ 31ರ ವರೆಗೆ ಹೊಸ ಮಾರ್ಗಸೂಚಿ ಜಾರಿಯಲ್ಲಿರುವು ದಾಗಿಯೂ ಹೇಳಿದೆ. ಅಂತಾರಾಜ್ಯ ಹಾಗೂ ರಾಜ್ಯದೊಳಗಿನ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ ಎಂದೂ ಹೇಳಿದೆ.
ರಾಜ್ಯಗಳಿಗೆ ದಂಡ ವಿಧಿಸುವ ಅಧಿಕಾರ
ಜನರು ನಿಯಮ ಪಾಲಿಸುವಂತೆ ಆಯಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ನೋಡಿಕೊಳ್ಳಬೇಕು. ದಂಡ ಅಥವಾ ಇತರ ಕ್ರಮಗಳ ಕುರಿತು ಆಯಾ ಸರಕಾರಗಳೇ ತೀರ್ಮಾನ ಕೈಗೊಳ್ಳಬಹುದು. ಕೇಂದ್ರ ಸರಕಾರದ ಪೂರ್ವಾನುಮತಿ ಇಲ್ಲದೇ, ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಲಾಕ್‌ಡೌನ್ ಹೇರಲು ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ಇದೇ ವೇಳೆ, ವಾರದ ಪಾಸಿಟಿವಿಟಿ ದರ ಶೇ. 10ಕ್ಕಿಂತ ಹೆಚ್ಚಿದ್ದರೆ ಅಂಥ ನಗರಗಳಲ್ಲಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.