![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 31, 2020, 5:53 PM IST
ನವದೆಹಲಿ: ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿರುವ ಘಟನೆ ಸೋಮವಾರ (ಆಗಸ್ಟ್ 31, 2020)ನಡೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ಮುಖರ್ಜಿ ಅವರು ಟ್ವೀಟ್ ಮಾಡಿ ವಿಷಯ ಹಂಚಿಕೊಂಡು, ತನ್ನ ಸಂಪರ್ಕಕ್ಕೆ ಬಂದವರು ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ: ಕ್ಲರ್ಕ್ to ರಾಷ್ಟ್ರಪತಿಯವರೆಗೆ “ಪ್ರಣಬ್” ರಾಜಕೀಯ ಜೀವನಗಾಥೆ; ಕೈತಪ್ಪಿದ್ದ ಪ್ರಧಾನಿ ಪಟ್ಟ
ನಂತರ ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ಭಾರೀ ಪ್ರಮಾಣದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಲ್ಲದೇ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ನಿಗಾವಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಆದರೆ ಕೊನೆಗೂ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ತೀರಾ ವಿಷಮಸ್ಥಿತಿಗೆ ಹೋಗಿದ್ದು, ಇಹಲೋಕ ತ್ಯಜಿಸಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.