ಮೇ 5ರಿಂದ 14 ದಿನಗಳವರೆಗೆ ಆಂಧ್ರಪ್ರದೇಶದಲ್ಲಿ ಕರ್ಫ್ಯೂ ಜಾರಿ
Team Udayavani, May 4, 2021, 7:45 AM IST
ಆಂಧ್ರಪ್ರದೇಶ : ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಮೇ 5 ರಿಂದ 14 ದಿನಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಘೋಷಣೆ ಮಾಡಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು ಸೆಕ್ಷನ್ 144 ಜಾರಿ ಮಾಡಲಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ತೆರೆಯಲಿವೆ. ಹೆಚ್ಚು ಜನ ಗುಂಪು ಸೇರುವಂತಿಲ್ಲ. ಹಾಗೇನಾದ್ರು ಗುಂಪು ಸೇರಿದ್ದೇ ಆದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಕೋವಿಡ್ ಪರಿಸ್ಥಿತಿ, ಲಸಿಕೆ ವಿತರಣೆ ಮತ್ತು ಸಾರ್ವಜನಿಕರ ಆರೋಗ್ಯದ ಬಗ್ಗೆ ಚರ್ಚೆ ನಡೆಸಿದರು.
ಆಂಧ್ರಪ್ರದೇಶದಲ್ಲಿ 24 ಗಂಟೆಗಳಲ್ಲಿ (ಸೋಮವಾರ) 18,972 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ 71 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಾದ್ಯಂತ ಈವರೆಗೆ ಒಟ್ಟು 1,66,02,873 ಪರೀಕ್ಷೆಗಳನ್ನು ನಡೆಸಲಾಗಿದೆ. ತಿಂಗಳಿಗೆ ಸರಾಸರಿ 3.10 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.