ಕೋವಿಡ್: ಹಬ್ಬದ ವೇಳೆ ಎಚ್ಚರ; ಕೇಂದ್ರ ಸಮಿತಿ ಪ್ರತಿಪಾದನೆ; ಚಳಿಗಾಲದಲ್ಲಿ 2ನೇ ಅಲೆ
Team Udayavani, Oct 19, 2020, 6:25 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಹಬ್ಬದ ಸಮಯದಲ್ಲಿ ನಾಗರಿಕರು ಎಚ್ಚರಿಕೆ ಕ್ರಮಗಳನ್ನು ಪಾಲಿಸದೆ ಇದ್ದರೆ ದೇಶದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಪ್ರಸಕ್ತ ಚಳಿಗಾಲದ ಅವಧಿಯಲ್ಲಿ ಕೊರೊನಾದ 2ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೊರೊನಾ ನಿಯಂತ್ರಣಕ್ಕೆ ಸರಕಾರ ರಚಿಸಿದ್ದ ತಜ್ಞರ ಸಮಿತಿ ಎಚ್ಚರಿಕೆ ನೀಡಿದೆ.
ಐಐಟಿ ಹೈದರಾಬಾದ್ ಪ್ರಾಧ್ಯಾಪಕ ಎಂ. ವಿದ್ಯಾಸಾಗರ ನೇತೃತ್ವದ ಸಮಿತಿ ಅಧ್ಯಯನ ನಡೆಸಿ ಈ ಅಭಿಪ್ರಾಯಕ್ಕೆ ಬಂದಿದೆ. ಮುನ್ನೆಚ್ಚರಿಕೆ ಇಲ್ಲದಿದ್ದರೆ ಹಬ್ಬದ ಋತುವಿನಲ್ಲಿ 26 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣ ದಾಖಲಾಗಬಹುದು (ಈಗ ಇರುವುದು 7.83 ಲಕ್ಷ ) ಎಂದಿರುವ ತಜ್ಞರು ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ. ದೇಶದಲ್ಲಿ ಶೇ. 30ರಷ್ಟು ಮಂದಿ ಮಾತ್ರ ಸೋಂಕಿನ ವಿರುದ್ಧ ಪ್ರತಿಕಾಯಗಳನ್ನು ಹೊಂದಿದ್ದಾರೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಸೋಂಕು ಏರಿಳಿತ
ದೇಶದಲ್ಲಿ ಕೋವಿಡ್ ಸೋಂಕಿನ ಏರಿಕೆಯ ಗರಿಷ್ಠ ಮಿತಿ ಈಗಾಗಲೇ ತಲುಪಿದೆ. ಸದ್ಯ ಕಡಿಮೆಯಾಗುತ್ತಿದೆ. ನಿಯಂತ್ರಣ ಕ್ರಮಗಳನ್ನು ಸಮರ್ಪಕವಾಗಿ ಕೈಗೊಂಡರೆ ಮುಂದಿನ ವರ್ಷದ ಆರಂಭದಲ್ಲಿ ನಿಯಂತ್ರಿಸಲು ಸಾಧ್ಯ. ಇಲ್ಲದಿದ್ದರೆ ದೇಶದಲ್ಲಿ ಸೋಂಕಿತರ ಸಂಖ್ಯೆ 1.6 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸಮಿತಿ ಎಚ್ಚರಿಸಿದೆ.
ಲಾಕ್‌ಡೌನ್‌ನಿಂದ ನೆರವು
ಮಾರ್ಚ್‌ನಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ಸೋಂಕು ಹರಡು ವುದನ್ನು ತಡೆಯಲು ನೆರವಾಯಿತು. ಇಲ್ಲದಿದ್ದರೆ ದೇಶದಲ್ಲಿ ಸಾವಿನ ಸಂಖ್ಯೆ 25 ಲಕ್ಷಕ್ಕಿಂತ ಹೆಚ್ಚಾಗುವ ಸಾಧ್ಯತೆಗಳಿದ್ದವು ಎನ್ನಲಾಗಿದೆ.
ವಾಯುಮಾಲಿನ್ಯದಿಂದ ಹೆಚ್ಚಳ?
ವಾಯುಮಾಲಿನ್ಯ ಹೆಚ್ಚುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಇದು ಜನರನ್ನು ಹೆಚ್ಚು ತೊಂದರೆಗೆ ಸಿಲುಕಿಸಲಿದೆ ಎಂದು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಯ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ನೀರಜ್ ನಿಶ್ಚಲ್ ನೇತೃತ್ವದ ಸಮಿತಿ ಅಭಿಪ್ರಾಯಪಟ್ಟಿದೆ. ಈ ಪೈಕಿ ಸಮಾಜದ ಕೆಳ ಸ್ತರದಲ್ಲಿರುವ ವ್ಯಕ್ತಿಗಳಿಗೆ ಇದರಿಂದ ಹೆಚ್ಚಿನ ಸಮಸ್ಯೆ ಉಂಟಾಗಬಹುದೆಂದು ನಿಶ್ಚಲ್ ತಿಳಿಸಿದ್ದಾರೆ.
ಓಣಂ ಸಂದರ್ಭ ನಿರ್ಲಕ್ಷ್ಯ ತೋರಿದ್ದಕ್ಕೆ ಕೇರಳ ಬೆಲೆ ತೆರುತ್ತಿದೆ. ಜೀವ ಒತ್ತೆ ಇಟ್ಟು ಹಬ್ಬಗಳನ್ನು ಆಚರಿಸಬೇಕು ಎಂದು ಯಾರೂ ಹೇಳುವುದಿಲ್ಲ.
– ಡಾ| ಹರ್ಷವರ್ಧನ್, ಕೇಂದ್ರ ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.