![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 16, 2020, 9:29 AM IST
ನವದೆಹಲಿ: ಭಾರತದಲ್ಲಿ ಗುರುವಾರ ಬೆಳಗ್ಗೆಯ ವೇಳೆಗೆ ಕೋವಿಡ್ 19 ಪಾಸಿಟಿವ್ ಪ್ರಕರಣಗಳು 12,000 ಗಡಿ ದಾಟಿದೆ. ಮೃತರಾದವರ ಸಂಖ್ಯೆ ಕೂಡ 414 ತಲುಪಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಟ್ಟಾರೆ ಸೋಂಕಿತರ ಪ್ರಮಾಣ 12,380 ಜನರಿದ್ದು, ಇದರಲ್ಲಿ ಈಗಾಗಲೇ 1,488 ಜನರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 37 ಜನರು ಕೊನೆಯುಸಿರೆಳೆದಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಜನರು ಈ ಮಾರಕ ವೈರಾಣುವಿಗೆ ತುತ್ತಾಗಿದ್ದು ಇಲ್ಲಿ 2,916 ಜನರು ಸೋಂಕಿತರಿದ್ದು 187 ಜನರು ಮೃತಪಟ್ಟಿದ್ದಾರೆ.
ದೆಹಲಿ ಎರಡನೇ ಅತೀ ಹೆಚ್ಚು ಸೋಂಕಿತರಿರುವ ಪ್ರದೇಶವಾಗಿದ್ದು 1,578 ಜನರು ಭಾಧಿತರಾಗಿದ್ದಾರೆ. ದುರಂತವೆಂದರೇ ಫಿಜ್ಜಾ ಡೆಲಿವರಿ ಬಾಯ್ ನಲ್ಲೂ ಸೋಂಕು ಕಂಡುಬಂದಿದ್ದು, ಈತನೊಂದಿಗೆ ಸಂಪರ್ಕಕ್ಕೆ ಬಂದಿದ್ದ 70 ಜನರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಾತ್ರವಲ್ಲದೆ ದೆಹಲಿಯ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಅವರಿಗೂ ಸೋಂಕು ತಗುಲಿರುವ ಪಾಸಿಟಿವ್ ವರದಿ ಬಂದಿದೆ.
ಕೇಂದ್ರ ಸರ್ಕಾರ ಮುಂಬೈ, ಕೊಲ್ಕತ್ತಾ, ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳು, ಹೈದರಬಾದ್, ಚೆನ್ನೈ, ಜೈಪುರ, ಆಗ್ರಾ ಮುಂತಾದ ಪ್ರಮುಖ ಪ್ರದೇಶಗಳನ್ನು ಕೋವಿಡ್ 19 ಹಾಟ್ ಸ್ಪಾಟ್ ಗಳೆಂದು ಘೋಷಣೆ ಮಾಡಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.