Gurugram; ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿ ನಾಲ್ವರು ಸಾವು| Video
Team Udayavani, Apr 21, 2024, 9:11 AM IST
ಗುರುಗ್ರಾಮ (ಹರ್ಯಾಣ): ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿ ನಾಲ್ವರು ಮೃತಪಟ್ಟ ಘಟನೆ ಗುರುಗ್ರಾಮದ ಅರ್ಜುನ್ ನಗರದಲ್ಲಿ ನಡೆದಿದೆ.
ಅರ್ಜುನ್ ನಗರಕ್ಕೆ ಎದುರಾಗಿರುವ ಗೋಡೆ ಕುಸಿದು ನಾಲ್ವರು ವ್ಯಕ್ತಿಗಳು ಮತ್ತು ಇಬ್ಬರು ಮಕ್ಕಳು ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಘಟನೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ಷಣಾ ಕಾರ್ಯಾಚರಣೆ ನಡೆಸಿದರು.
ರಕ್ಷಣಾ ಕಾರ್ಯಾಚರಣೆಯ ಹೊರತಾಗಿಯೂ ಬಾಲಕಿ ಮತ್ತು ಮೂವರು ವಯಸ್ಕರು ಮೃತಪಟ್ಟರು ಎಂದು ವರದಿ ತಿಳಿಸಿದೆ.
ಮೃತರನ್ನು 11 ವರ್ಷದ ತಾನ್ಯಾ, 70 ವರ್ಷದ ದೇವಿ ದಯಾಳ್, 54 ವರ್ಷದ ಮನೋಜ್ ಗಾಬಾ ಮತ್ತು 52 ವರ್ಷದ ಕೃಷ್ಣ ಕುಮಾರ್ ಎಂದು ಗುರುತಿಸಲಾಗಿದೆ.
ದೀಪಾ ಪ್ರಧಾನ್ ಎಂಬವರು ಗಾಯಗೊಂಡಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
#WATCH | Haryana: Four people, including a child, died when the walls of a crematorium collapsed on them in Arjun Nagar, Gurugram today. Their postmortem is being done. Police investigation is underway and further action will be taken. pic.twitter.com/5ezomHRd3K
— ANI (@ANI) April 20, 2024
ಘಟನೆಯ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಎಲ್ಲಾ ಅಗತ್ಯ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಪೊಲೀಸ್ ತಂಡವು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.