Chhattisgarh: ನಕ್ಸಲರಿಂದ ಐಇಡಿ ಸ್ಫೋಟ… ಚುನಾವಣಾ ಕರ್ತವ್ಯದಲ್ಲಿದ್ದ ಯೋಧನಿಗೆ ಗಾಯ
Team Udayavani, Nov 7, 2023, 9:08 AM IST
ಛತ್ತೀಸ್‌ಗಢ: ರಾಜ್ಯದಲ್ಲಿ ಮತದಾನ ಆರಂಭವಾದ ಬೆನ್ನಲ್ಲೇ ನಕ್ಸಲರು ನಡೆಸಿದ ಸುಧಾರಿತ ಸ್ಫೋಟದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧನೋರ್ವ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಗಾಯಗೊಂಡಿರುವ ಯೋಧನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದ್ದು, ಪ್ರಥಮ ಚಿಕಿತ್ಸೆ ಪಡೆದು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ.
ಸುಕ್ಮಾದ ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಚವಾಣ್ ನೀಡಿರುವ ಮಾಹಿತಿಯಂತೆ ಗಾಯಗೊಂಡಿರುವ ಯೋಧ ಕೋಬ್ರಾ ಬೆಟಾಲಿಯನ್‌ನವರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.
ಕೋಬ್ರಾ ಪಡೆ ಮತ್ತು ಸಿಆರ್ ಪಿಎಫ್ ಸಿಬ್ಬಂದಿ ಕ್ಯಾಂಪ್ ತೊಂಡಮಾರ್ಕಾದಿಂದ ಎಲ್ಮಗುಂದ ಗ್ರಾಮಕ್ಕೆ ಪ್ರದೇಶದಲ್ಲಿ ಕಾರ್ಯಾಚರಣೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಸ್ತು ತಿರುಗುತ್ತಿದ್ದಾಗ ಜವಾನ ನಕ್ಸಲರು ಅಳವಡಿಸಿದ್ದ ಐಇಡಿಯನ್ನು ತುಳಿದು ಸ್ಪೋಟಗೊಂಡ ಪರಿಣಾಮ ಯೋಧನ ಕಾಲಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.
ಎರಡನೇ ಘಟನೆ:
ಎರಡು ದಿನಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಎರಡನೇ ಐಇಡಿ ಸ್ಫೋಟ ಇದಾಗಿದ್ದು, ಸೋಮವಾರ, ಕಂಕೇರ್‌ನಲ್ಲಿ ಐಇಡಿ ಸ್ಫೋಟಗೊಂಡು ಬಿಎಸ್‌ಎಫ್ ಕಾನ್‌ಸ್ಟೆಬಲ್ ಮತ್ತು ಇಬ್ಬರು ಮತದಾನ ತಂಡದ ಸದಸ್ಯರು ಗಾಯಗೊಂಡಿದ್ದರು. ಗಾಯಗೊಂಡ ಕಾನ್ಸ್‌ಟೇಬಲ್‌ನನ್ನು ಪ್ರಕಾಶ್ ಚಂದ್ ಎಂದು ಗುರುತಿಸಲಾಗಿದ್ದು, ಆತನಿಗೆ ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಛೋಟೆಪೇಥಿಯಾಗೆ ರವಾನಿಸಲಾಗಿದೆ.
ಛತ್ತೀಸ್‌ಗಢದಲ್ಲಿ ನಕ್ಸಲ್ ಪೀಡಿತ ಬಸ್ತಾರ್ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಸುಗಮ ಮತದಾನವನ್ನು ಖಚಿತಪಡಿಸಿಕೊಳ್ಳಲು, 20 ಕ್ಷೇತ್ರಗಳ ಸೂಕ್ಷ್ಮ ಪ್ರದೇಶಗಳಲ್ಲಿನ 600 ಕ್ಕೂ ಹೆಚ್ಚು ಮತಗಟ್ಟೆಗಳಿಗೆ ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ.
90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: Assembly Elections: ಛತ್ತೀಸ್‌ಗಢ, ಮಿಜೋರಾಂನಲ್ಲಿ ಮತದಾನ ಆರಂಭ, ಬಿಗಿ ಭದ್ರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.