Gujarat: ಇಬ್ಬರನ್ನು ಬಲಿ ತೆಗೆದುಕೊಂಡ ಬಿಪರ್‌ಜಾಯ್ ಚಂಡಮಾರುತ
Team Udayavani, Jun 16, 2023, 10:23 AM IST
ಭಾವ್ನಗರ: ಬಿಪರ್‌ಜಾಯ್ ಚಂಡಮಾರುತದಿಂದ ಗುಜರಾತ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯನ್ನು ತಂದಿದ್ದು, ಭಾವ್ನಗರ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಮೇಕೆಗಳನ್ನು ರಕ್ಷಣೆಗೆ ತೆರಳಿದ್ದ ತಂದೆ-ಮಗ ಮೃತಪಟ್ಟ ಘಟನೆ ನಡೆದಿದೆ.
ಬಿಪರ್‌ಜಾಯ್ ಚಂಡಮಾರುತ ಗುಜರಾತ್‌ನ ಕರಾವಳಿಗೆ ಅಪ್ಪಳಿಸಿದ್ದು, ಭಾರಿ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ವರುಣನ ಅಬ್ಬರದಿಂದ ಅವಾಂತರ ಸೃಷ್ಟಿಯಾಗಿದೆ.
ಮಳೆಯಿಂದಾಗಿ ಹತ್ತಾರು ಮರಗಳು ಧರೆಗುರುಳಿ ಬಿದ್ದಿವೆ. ನೂರಾರು ಗ್ರಾಮಗಳಲ್ಲಿ ವಿದ್ಯುತ್ ಸ್ಥಗಿತವಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
#WATCH | Gujarat: Mandvi witnesses strong winds as an impact of cyclone ‘Biparjoy’ pic.twitter.com/2JKV5Rwhkz
— ANI (@ANI) June 16, 2023
ಚಂಡಮಾರುತದಿಂದ ಹಾನಿಗೆ ಗುರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಗುಜರಾತ್ ಪೊಲೀಸ್ ಇಲಾಖೆ, ಭೂಸೇನೆ, ಎನ್‌ಡಿಆರ್‌ಎಫ್, ರಾಜ್ಯ ವಿಪತ್ತು ನಿರ್ವಹಣ ಪಡೆ, ಐಎಎಫ್, ಭಾರತೀಯ ನೌಕಾದಳಗಳು ವಿವಿಧ ರೀತಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ನೆರವಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.