ತಮಿಳುನಾಡಿನಲ್ಲಿ ಗಜ ಆರ್ಭಟ, ಭಾರೀ ಮಳೆ;11 ಮಂದಿ ಬಲಿ,ತೀವ್ರ ಆತಂಕ
Team Udayavani, Nov 16, 2018, 10:10 AM IST
ಚೆನ್ನೈ: ನಿರೀಕ್ಷೆಯಂತೆ ಗುರುವಾರ ತಡರಾತ್ರಿ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಗೆ ಅಪ್ಪಳಿಸಿದ್ದು, ಭಾರೀ ಮಳೆ, ಗಾಳಿ ಮತ್ತು ಭೂಕುಸಿತ ಸಂಭವಿಸಿದ್ದು, ಶುಕ್ರವಾರ ಬೆಳಗ್ಗಿನವರೆಗೆ 11 ಮಂದಿ ಬಲಿಯಾಗಿದ್ದಾರೆ.
ತಂಜಾವೂರಿನಲ್ಲಿ ನಾಲ್ವರು ಮತ್ತು ಕಡಲೂರಿನಲ್ಲಿ ಇಬ್ಬರು ಅವಘಡಗಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಕಡಲೂರು ಮತ್ತು ನಾಗಪಟ್ಟಿಣಂಗಳಲ್ಲಿ ರಕ್ಷಣಾ ಕಾರ್ಯಕ್ಕೆ ಹಡಗುಗಳನ್ನು ಸಜ್ಜಾಗಿರಿಸಲಾಗಿದ್ದು, ತಂಜಾವೂರು, ತಿರುವಾರೂರು, ಪುದುಕೊಟ್ಟಾಯ್, ನಾಗಪಟ್ಟಿಣಂ, ಕಡಲೂರು ಮತ್ತು ರಾಮನಾಥಪುರಂ ಜಿಲ್ಲಾಧಿಕಾರಿಗಳು ಜಿಲ್ಲಾ ಸ್ಥಳಗಳಲ್ಲಿಯೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯ ನಿಗಾ ವಹಿಸಿದ್ದಾರೆ.
ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 100ರಿಂದ 120 ಕಿ.ಮೀ. ವೇಗದಲ್ಲಿ ಪಂಬನ್ ಮತ್ತು ಕಡಲೂರು ಮಧ್ಯದಲ್ಲಿ ಚಂಡಮಾರುತ ಅಪ್ಪಳಿಸಿದೆ. ಕರೈಕಲ್ ಸೇರಿದಂತೆ ನಾಗಪಟ್ಟಿಣಂ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಎರಡೂ ರಾಜ್ಯ ಸರ್ಕಾರಗಳೂ ಸರ್ವ ಸನ್ನದ್ಧವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಗೊಳಿಸಲಾಗಿದೆ. 30,500 ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಶುಕ್ರವಾರವೂ ಈ ಏಳೂ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.