ತಿರುಪತಿಯಲ್ಲಿ ಮ್ಯಾಂಡಸ್ ಹಾವಳಿ; ತಿರುಮಲ ದೇಗುಲದ ಆವರಣ ಜಲಾವೃತ
Team Udayavani, Dec 10, 2022, 9:53 PM IST
ಚೆನ್ನೈ: ಶುಕ್ರವಾರ ಮಧ್ಯರಾತ್ರಿ ತಮಿಳುನಾಡಿನ ಮಾಮಲ್ಲಪುರಂ ಕರಾವಳಿಯನ್ನು ಹಾದುಹೋದ ಮ್ಯಾಂಡಸ್ ಚಂಡಮಾರುತವು 5 ರಾಜ್ಯಗಳನ್ನು ಮಳೆಯಲ್ಲಿ ತೋಯುವಂತೆ ಮಾಡಿದೆ.
ಚಂಡಮಾರುತದ ಎಫೆಕ್ಟ್ ಎಂಬಂತೆ, ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಮಾತ್ರವಲ್ಲದೇ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ.
ಮ್ಯಾಂಡಸ್ ಅಬ್ಬರದಿಂದಾಗಿ ಆಂಧ್ರಪ್ರದೇಶದ ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಆವರಣವು ಜಲಾವೃತವಾಗಿದೆ. ಇದರಿಂದಾಗಿ ಶುಕ್ರವಾರ ಮತ್ತು ಶನಿವಾರ ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದ ಭಕ್ತಾದಿಗಳು ಹಲವು ಸಮಸ್ಯೆಗಳನ್ನು ಎದುರಿಸಬೇಕಾಯಿತು.
ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಮ್ಸ್)ಯ ಕಾರ್ಮಿಕರು ದೇಗುಲದ ಆವರಣದಲ್ಲಿನ ನೀರನ್ನು ಪಂಪ್ ಮೂಲಕ ಹೊರಹಾಕಲು ಹರಸಾಹಸ ಪಟ್ಟರು. ಇದೇ ವೇಳೆ, ಘಾಟ್ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದ ಕಾರಣ, ಜಾಗರೂಕರಾಗಿ ಪ್ರಯಾಣಿಸುವಂತೆ ಭಕ್ತರಿಗೆ ಟಿಟಿಡಿ ಮನವಿ ಮಾಡಿದ್ದೂ ಕಂಡುಬಂತು.
ತಿರುಪತಿಯ ನಾಯ್ಡುಪೇಟಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ರವರೆಗಿನ 24 ಗಂಟೆಗಳ ಅವಧಿಯಲ್ಲಿ 281.5 ಮಿ.ಮೀ. ಮಳೆಯಾಗಿದೆ.
ಬೀಚ್ ರ್‍ಯಾಂಪ್‌ಗೆ ಹಾನಿ:
ತಮಿಳುನಾಡಿನ ಮರೀನಾ ಬೀಚ್‌ಗೆ ಬರುವ ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ನ.27ರಂದು ಬೀಚ್ ರ್‍ಯಾಂಪ್ ಅನ್ನು ಸರ್ಕಾರ ನಿರ್ಮಾಣ ಮಾಡಿತ್ತು. ಆದರೆ, ಶುಕ್ರವಾರ ರಾತ್ರಿ ಮ್ಯಾಂಡಸ್ ಅಬ್ಬರದಿಂದ ಗಂಟೆಗೆ 80 ಕಿ.ಮೀ. ವೇಗದಲ್ಲಿ ಬೀಸಿದ ಬಿರುಗಾಳಿಯಿಂದ ಬೀಚ್ ರ್‍ಯಾಂಪ್‌ಗೆ ಹಾನಿಯಾಗಿದೆ. ಚೆನ್ನೈನಲ್ಲಿ ಒಂದೇ ದಿನ 115 ಮಿ.ಮೀ. ಮಳೆಯಾಗಿದೆ.
ಚಂಡಮಾರುತದಿಂದ ಮೃತಪಟ್ಟವರು- 4
ಸಾವಿಗೀಡಾದ ಜಾನುವಾರುಗಳು – 100
ಹಾನಿಗೀಡಾದ ಮನೆಗಳು- 181
ಚೆನ್ನೈನಲ್ಲಿ ಧರೆಗುರುಳಿದ ಮರಗಳು- 400
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.