ಓಖಿ ಚಂಡಮಾರುತ ನಡುಗಿದ ಕರಾವಳಿ; ಸಾವಿನ ಸಂಖ್ಯೆ 12ಕ್ಕೆ


Team Udayavani, Dec 2, 2017, 6:00 AM IST

Cyclone-Ockhi,Heavy-rain.jpg



ಚೆನ್ನೈ/ತಿರುವನಂತಪುರಂ: ಲಕ್ಷದ್ವೀಪದತ್ತ ಸಾಗುತ್ತಿರುವ ಒಖೀ ಚಂಡಮಾರುತವು ತಮಿಳುನಾಡು, ಕೇರಳ ಕರಾವಳಿಯನ್ನು ಅಕ್ಷರಶಃ ನಡುಗಿಸಿದೆ. ಚಂಡಮಾರುತದ ಪ್ರಭಾವದಿಂದಾಗಿ ಈ ಎರಡೂ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟು ತೀವ್ರತೆ ಪಡೆಯಲಿದ್ದು, ಲಕ್ಷದ್ವೀಪದತ್ತ ಹೋಗಿ, ನಂತರ ಅಲ್ಲಿಂದ ಉತ್ತರದ ಕಡೆಗೆ ಸಂಚರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರೀ ಬಿರುಗಾಳಿ, ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಕಂಬಗಳು ಉರುಳಿರುವ ಕಾರಣ, ಕಗ್ಗತ್ತಲು ಆವರಿಸಿದೆ. ಗಾಳಿಯ ತೀವ್ರತೆಗೆ ನೂರಾರು ಮರಗಳು ನೆಲಕ್ಕುರುಳಿದ್ದು, ಮನೆ ಕಟ್ಟಡಗಳು ಹಾನಿಗೀಡಾಗಿವೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೇರಳದಲ್ಲಿ ಶುಕ್ರವಾರ ಚಂಡಮಾರುತ ಸಂಬಂಧಿ ಘಟನೆಯಿಂದಾಗಿ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 7ಕ್ಕೇರಿದೆ. ಹೀಗಾಗಿ, ಒಟ್ಟಾರೆ ಕೇರಳ ಮತ್ತು ತಮಿಳುನಾಡಿನಲ್ಲಿ ಎರಡು ದಿನಗಳಲ್ಲಿ 12 ಮಂದಿ ಅಸುನೀಗಿದಂತಾಗಿದೆ.

ಓಖಿ ಚಂಡಮಾರುತದಿಂದಾಗಿ ಸಮುದ್ರದಲ್ಲಿ ಸಿಲುಕಿದ್ದ 218 ಮಂದಿ ಕೇರಳದ ಮೀನುಗಾರರನ್ನು ಶುಕ್ರವಾರ ರಕ್ಷಿಸಲಾಗಿದೆ. ಶನಿವಾರ ಸಂಜೆಯವರೆಗೂ ಸಮುದ್ರದ ಅಲೆಗಳ ಅಬ್ಬರ ಜೋರಾಗಿರಲಿದ್ದು, ಕರಾವಳಿ ತೀರದ ಜನ ಆದಷ್ಟು ಎಚ್ಚರಿಕೆಯಿಂದಿರುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ.

ಸಂಕಷ್ಟದಲ್ಲಿ ಮೀನುಗಾರರು:
ಇದೇ ವೇಳೆ, 38ರಷ್ಟು ಮೀನುಗಾರಿಕಾ ದೋಣಿಗಳು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಅದರಲ್ಲಿರುವವರಿಗೆ ನೌಕಾಪಡೆಯು ಆಹಾರ ಮತ್ತಿತರ ಪರಿಹಾರ ಕಿಟ್‌ಗಳನ್ನು ಒದಗಿಸಿದೆ. ಜತೆಗೆ, ಇತರೆ ದೋಣಿಗಳ ಶೋಧ ಕಾರ್ಯವನ್ನೂ ನಡೆಸಲಾಗುತ್ತಿದ್ದು, ಒಟ್ಟು ಎಷ್ಟು ಮಂದಿ ಬೆಸ್ತರು ನೀರಿಗಿಳಿದಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ ಎಂದು ಸರ್ಕಾರ ಹೇಳಿದೆ.

ಜಪಾನ್‌ ನೆರವು:
ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರ ನೆರವಿಗೆ ಜಪಾನ್‌ನ ಸರಕು ನೌಕೆಯೊಂದು ಧಾವಿಸಿದ್ದು, 60 ಮೀನುಗಾರರನ್ನು ರಕ್ಷಿಸಿದೆ. ಇನ್ನೊಂದೆಡೆ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬ ಸದಸ್ಯರು ಆತಂಕಕ್ಕೀಡಾಗಿದ್ದು, ಶುಕ್ರವಾರ ಕೊಲ್ಲಂ ಮತ್ತು ತಿರುವನಂತಪುರದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಸ್ತರನ್ನು ರಕ್ಷಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಆಡಳಿತಾರೂಢ ಎಲ್‌ಡಿಎಫ್ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಕಿಡಿಕಾರಿದ್ದು, ಸೂಕ್ತ ಮುಂಜಾಗರೂಕತಾ ಕ್ರಮ ಕೈಗೊಂಡಿಲ್ಲ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆಯೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿವೆ.

579 ಮರಗಳು ಧರೆಗೆ:
ಚಂಡಮಾರುತದಿಂದಾಗಿ 1,200 ಮಂದಿ ತೊಂದರೆಗೆ ಸಿಲುಕಿದ್ದು, ಅವರನ್ನೆಲ್ಲ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. ಕನ್ಯಾಕುಮಾರಿ ಜಿಲ್ಲೆಯಲ್ಲಿ ಅತ್ಯಧಿಕ ಹಾನಿಯಾಗಿದೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸಮರೋಪಾದಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ತಿರುನಲ್ವೇಲಿ ಮತ್ತು ಕನ್ಯಾಕುಮಾರಿಯಲ್ಲಿ 579 ಮರಗಳು ಧರೆಗುರುಳಿದ್ದು, ಆ ಪೈಕಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿದ್ದಿದ್ದ 329 ಮರಗಳನ್ನು ತೆರವುಗೊಳಿಸಲಾಗಿದೆ. ವಿದ್ಯುತ್‌ ಕೊರತೆ ಎದುರಿಸುತ್ತಿರುವ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಸಲುವಾಗಿ, 100 ಡೀಸೆಲ್‌ ಚಾಲಿತ ಜನರೇಟರ್‌ಗಳನ್ನು ಕಳುಹಿಸಿಕೊಟ್ಟಿದ್ದೇವೆ. 18 ದೋಣಿಗಳಲ್ಲಿದ್ದ 76 ಮೀನುಗಾರರನ್ನು ರಕ್ಷಿಸಲಾಗಿದೆ. ಒಟ್ಟು 29 ದೋಣಿಗಳು ಹಾಗೂ 106 ಬೆಸ್ತರು ಸಮುದ್ರಕ್ಕಿಳಿದಿದ್ದರು. ಉಳಿದವರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದೂ ಸಿಎಂ ಮಾಹಿತಿ ನೀಡಿದ್ದಾರೆ.

ಜನರ ಸ್ಥಳಾಂತರ:
ಲಕ್ಷದ್ವೀಪದಲ್ಲಿ ಕಲ್ಪೇನಿ, ಮಿನಿಕಾಯ್‌, ಕವರತಿ, ಅಗತ್ತಿ, ಅಂಡ್ರೋತ್‌, ಕಡಮತ್‌, ಅಮಿನಿ ದ್ವೀಪ ಸೇರಿದಂತೆ ತಗ್ಗುಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಹೆಚ್ಚಿನವರಿಗೆ ಶಾಲೆಗಳಲ್ಲಿ ಆಶ್ರಯ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಪೇನಿಯಲ್ಲಿ ನಿಲ್ಲಿಸಲಾಗಿದ್ದ 5 ದೋಣಿಗಳು ಹಾನಿಗೀಡಾಗಿವೆ. ಏತನ್ಮಧ್ಯೆ, ದೆಹಲಿಯಲ್ಲಿ ಹವಾಮಾನ ಇಲಾಖೆ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದು, ಚಂಡಮಾರುತಕ್ಕೆ ಸಂಬಂಧಿಸಿ ಚರ್ಚಿಸಿದ್ದಾರೆ.

ಕೇರಳದ ಸ್ಥಿತಿಯೇನು?
– ಶುಕ್ರವಾರ 3 ಸಾವು. ಮೃತರ ಸಂಖ್ಯೆ 7ಕ್ಕೇರಿಕೆ
– 29 ಪರಿಹಾರ ಶಿಬಿರಗಳ ಸ್ಥಾಪನೆ
– 491 ಕುಟುಂಬಗಳ 2755 ಮಂದಿಯನ್ನು ಇಲ್ಲಿಗೆ ಸ್ಥಳಾಂತರ
– 56 ಮನೆಗಳು ಸಂಪೂರ್ಣ ಧ್ವಂಸ
– 799 ಮನೆಗಳಿಗೆ ಭಾಗಶಃ ಹಾನಿ

ತಮಿಳುನಾಡಿನಲ್ಲಿ ಏನಾಯ್ತು?
– 5 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
– ಅಪಾಯದ ಮಟ್ಟ ತಲುಪಿದ ತಮಿರಭರಣಿ ನದಿ
– 2 ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿದ್ದ ಐವರು ನಾಪತ್ತೆ
– 62 ಮನೆಗಳು ಸಂಪೂರ್ಣ ಧ್ವಂಸ
– 240 ಮನೆಗಳಿಗೆ ಭಾಗಶಃ ಹಾನಿ, 579 ಮರಗಳು ಧರೆಗೆ

ಮಂಗಳೂರಿಂದ ಹೊರಟಿದ್ದ 2 ಹಡಗು ಮುಳುಗಡೆ
ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣೆ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಲಕ್ಷದ್ವೀಪದ ಬಳಿಯ ಕವರತಿ ಎಂಬಲ್ಲಿ ಈ ದುರ್ಘ‌ಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.