Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ
ಒಂದು ಲಕ್ಷ ಜನರ ಸ್ಥಳಾಂತರ, 394 ವಿಮಾನಗಳ ಸಂಚಾರ ರದ್ದು
Team Udayavani, May 27, 2024, 1:02 AM IST
ಕೋಲ್ಕತಾ: ರೆಮಲ್ ಚಂಡಮಾರುತವು ರವಿವಾರ ರಾತ್ರಿ ಬಾಂಗ್ಲಾ ಕರಾವಳಿಗೆ ಅಪ್ಪಳಿಸಿದೆ. ಇದರ ಪ್ರಭಾವದಿಂದಾಗಿ ಪಶ್ಚಿಮ ಬಂಗಾಲ, ಒಡಿಶಾ, ತ್ರಿಪುರ ಸಹಿತ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಚಂಡಮಾರುತ, ಮಳೆಯಿಂದಾಗಿ ರವಿವಾರ ಮಧ್ಯಾಹ್ನ ದಿಂದಲೇ ಕೋಲ್ಕತಾದಿಂದ ವಿಮಾನ ಗಳ ಹಾರಾಟವನ್ನು ರದ್ದು ಮಾಡಲಾ ಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ತಾಸಿಗೆ 110ರಿಂದ 120 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ವೇಗ 135 ಕಿ.ಮೀ.ಗೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಚಂಡಮಾರುತ ಉತ್ತರ ದಿಕ್ಕಿಗೆ ಚಲಿಸುತ್ತಿದ್ದು, ರವಿವಾರ ಮಧ್ಯರಾತ್ರಿಯಿಂದ ಸೋಮವಾರ ಸಂಜೆಯವರೆಗೆ ಕೋಲ್ಕತಾ, ಹೌರಾ, ಹೂಗ್ಲಿಯಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
1 ಲಕ್ಷ ಜನರ ಸ್ಥಳಾಂತರ
ಭಾರೀ ಮಳೆ ಸುರಿಯತ್ತಿರುವುದರಿಂದ ಕಾರಣ ಸಮುದ್ರ ತೀರದಲ್ಲಿರುವ ಜನರು ಹಾಗೂ ಮೀನುಗಾರರಿಗೆ ಸರಕಾರ ಎಚ್ಚರಿಕೆ ನೀಡಿದೆ. ತೀರ ಪ್ರದೇಶದಲ್ಲಿರುವ ಸುಮಾರು 1 ಲಕ್ಷ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ರಕ್ಷಣ ಕಾರ್ಯ ನಿರ್ವಹಿಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನ 16 ತಂಡಗಳನ್ನು ನಿಯೋಜಿಸಲಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ
ಹೊಸದಿಲ್ಲಿ: ರೀಮಲ್ ಚಂಡಮಾರುತದಿಂದ ಆಗುತ್ತಿರುವ ಹಾನಿ ಹಾಗೂ ಅದರ ಪರಿಹಾರ ಕಾರ್ಯಗಳ ಕುರಿತು ಪ್ರಧಾನಿ ಮೋದಿಯವರು ಹವಾಮಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಂಭಾವ್ಯ ಹಾನಿಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.