ತೌಕ್ತೆ ಚಂಡಮಾರುತ ರೌದ್ರಾವತಾರ: ಕಾಸರಗೋಡಿನಲ್ಲಿ ಮನೆ ಕುಸಿತ, ಕರಾವಳಿ ಪ್ರದೇಶದಲ್ಲಿ ಭೀತಿ
ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ.
Team Udayavani, May 15, 2021, 2:35 PM IST
ನವದೆಹಲಿ/ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿನ ತೀವ್ರ ವಾಯುಭಾರ ಕುಸಿತದ ಪರಿಣಾಮ ಮೇ 17ರಂದು ತೀವ್ರ ಸ್ವರೂಪದಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಇದು ಗುಜರಾತ್ ಕರಾವಳಿ ಪ್ರದೇಶವನ್ನು ಹಾದುಹೋಗಲಿದೆ ಎಂದು ವರದಿ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಹಲವೆಡೆ ಕರಾವಳಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಉಳ್ಳಾಲ: ತೌಖ್ತೆ ಚಂಡಮಾರುತದ ಪ್ರಭಾವಕ್ಕೆ ಸಮುದ್ರ ಪಾಲಾದ ಹಿಂದೂ ರುದ್ರಭೂಮಿ
ತೌಕ್ತೆ ಚಂಡಮಾರುತದ ರೌದ್ರಾವತಾರದಿಂದ ಕೇರಳದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕರಾವಳಿ ಭಾಗದ ಪ್ರದೇಶಗಳಲ್ಲಿ ತೀವ್ರ ಕಡಲ್ಕೊರೆತದಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡಿನಲ್ಲಿ ಸಮುದ್ರ ಪ್ರದೇಶದ ಸಮೀಪವಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿರುವುದಾಗಿ ವರದಿ ತಿಳಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಪ್ರದೇಶದಲ್ಲಿ ವಾಸವಾಗಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ತೀವ್ರ ವಾಯುಭಾರ ಕುಸಿತದಿಂದ ಹವಾಮಾನ ವೈಪರೀತ್ಯವಾಗಲಿದೆ. ಇದರಿಂದ ತೌಕ್ತೆ ಚಂಡಮಾರುತ ಶನಿವಾರ ಬೆಳಗ್ಗಿನಿಂದಲೇ ಆರಂಭವಾಗಲಿದ್ದು, ಶನಿವಾರ ರಾತ್ರಿಯ ಬಳಿಕ ತೀವ್ರವಾಗಿ ಅಪ್ಪಳಿಸಲಿದೆ ಎಂದು ವರದಿ ವಿವರಿಸಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ, ತೌಕ್ತೆ ಚಂಡಮಾರುತ ಅರಬ್ಬಿ ಸಮುದ್ರದ ಈಶಾನ್ಯ ಪ್ರದೇಶ, ಲಕ್ಷದ್ಚೀಪ, ಮಾಲ್ಡೀವ್ಸ್ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಅಲ್ಲದೇ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.