ಸೈರಸ್ ಮಿಸ್ತ್ರಿ ಕಾರು ಅಪಘಾತ ; ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಅತಿವೇಗದ ಚಾಲನೆ ಕೇಸ್
Team Udayavani, Nov 5, 2022, 10:43 PM IST
ಪಾಲ್ಘರ್: ಟಾಟಾ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಎರಡು ತಿಂಗಳ ನಂತರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ಶನಿವಾರ ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಅತಿವೇಗದ ಚಾಲನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಮೋಟಾರು ವಾಹನ ಕಾಯಿದೆಯ ಹೊರತಾಗಿ ಭಾರತೀಯ ದಂಡ ಸಂಹಿತೆ 304(ಎ) (ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣವಾಗುವುದು), 279 (ಸಾರ್ವಜನಿಕ ರಸ್ತೆಯಲ್ಲಿ ಅತಿವೇಗದ ಚಾಲನೆ), 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಿಸ್ತ್ರಿ (54) ಮತ್ತು ಅವರ ಸ್ನೇಹಿತ ಜಹಾಂಗೀರ್ ಪಾಂಡೋಲೆ ಸೆಪ್ಟೆಂಬರ್ 4 ರಂದು ಮುಂಬೈಗೆ ಹೊಂದಿಕೊಂಡಿರುವ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಸಂಭವಿಸಿದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರು ಮರ್ಸಿಡಿಸ್ ಕಾರಿನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿದ್ದರು.
ಕಾರು ಚಲಾಯಿಸುತ್ತಿದ್ದ ಮುಂಬೈನ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ ಹಾಗೂ ಪಕ್ಕದಲ್ಲಿ ಕುಳಿತಿದ್ದ ಪತಿ ಡೇರಿಯಸ್ ಪಾಂಡೋಲೆ ಗಂಭೀರವಾಗಿ ಗಾಯಗೊಂಡಿದ್ದರು.
ತನಿಖೆಯ ಸಮಯದಲ್ಲಿ, ಸಾಕ್ಷಿಗಳನ್ನು ಪ್ರಶ್ನಿಸಲಾಯಿತು ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಮರ್ಸಿಡಿಸ್ ಬೆಂಜ್ ಇಂಡಿಯಾ ಪುಣೆಯಿಂದ ವರದಿಗಳನ್ನು ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
“ವರದಿಗಳು ಮತ್ತು ತನಿಖೆಯ ಆಧಾರದ ಮೇಲೆ ಅಪಘಾತವು ದುಡುಕಿನ ಮತ್ತು ನಿರ್ಲಕ್ಷ್ಯದ ಚಾಲನೆಯ ಪರಿಣಾಮವಾಗಿದೆ ಎಂದು ದೃಢಪಟ್ಟಿದೆ. ಆದ್ದರಿಂದ ಡಾ ಅನಾಹಿತಾ ಪಾಂಡೋಲೆ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.