Dam water release: ಪುಣೆ ವಿವಿಧೆಡೆ ಜಲಾವೃತ
Team Udayavani, Aug 5, 2024, 1:01 AM IST
ಮುಂಬಯಿ: ಮಹಾರಾಷ್ಟ್ರದ ಖಡಕ್‌ವಾಸ್ಲಾ ಅಣೆ ಕಟ್ಟನ್ನು ತೆರೆದಿರುವ ಕಾರಣ ಪುಣೆಯ ಹಲವು ನಗರ ಗಳು ಜಲಾವೃತಗೊಂಡಿವೆ. ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಿರುವ ಕಾರಣ ಪರಿಸ್ಥಿತಿ ಕೈಮೀರುತ್ತಿದೆ ಈ ಹಿನ್ನೆಲೆಯಲ್ಲಿ ಪುಣೆಯ ಏಕ್ತಾ ನಗರ ಸೇರಿ ಹಲವೆಡೆ ರಕ್ಷಣ ಕಾರ್ಯಾಚರಣೆಗಾಗಿ ಸೇನಾ ಸಿಬಂದಿಯನ್ನು ನಿಯೋಜಿಸಲಾಗಿದೆ. ಏಕ್ತಾ ನಗರದ ಹಲವು ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಣೆಕಟ್ಟಿನಿಂದ ರವಿವಾರ 35,000 ಕ್ಯುಸೆಕ್ ನೀರು ಬಿಡುಗಡೆ ಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಏಕ್ತ ನಗರದ ಸಿನ್ಹಾಗಢ ರಸ್ತೆಯಲ್ಲಿರುವ ದ್ವಾರಕ ಸೊಸೈಟಿಯಲ್ಲಿ ಸೇನಾ ಸಿಬಂದಿಯನ್ನು ನಿಯೋಜಿಸ ಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.