ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ
Team Udayavani, Aug 12, 2020, 6:25 AM IST
ಹೊಸದಿಲ್ಲಿ: ಭಾರತೀಯ ಹಿಂದೂ ಅವಿಭಕ್ತ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳು 2005ಕ್ಕೆ ಮುನ್ನ ತಮ್ಮ ತಂದೆ ತೀರಿಹೋಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಿಗಬೇಕಿರುವ ಸಮಪಾಲು ಪಡೆಯಲುಅರ್ಹರು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ. ಅಲ್ಲದೆ ತನ್ನಿಂದ ಈ ಸ್ಪಷ್ಟನೆಗಾಗಿ ಕಾಯುತ್ತ, ಇತ್ಯರ್ಥಪಡಿಸದೆ ಇರುವ ಆಸ್ತಿ ಹಕ್ಕು ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಎಲ್ಲ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ.
ಹಿಂದೂ ಅವಿಭಕ್ತ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಸಮಪಾಲು ಪಡೆಯುವ ಹಕ್ಕುಳ್ಳವರು ಎಂದು 2005ರ ಸೆ. 9ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆ ತೀರ್ಪಿನ ಅನ್ವಯ ಹಿಂದೂ ಉತ್ತರಾಧಿಕಾರ ಕಾಯ್ದೆ (ಎಚ್‌ಎಸ್‌ಎ) ರೂಪಿಸಲಾಗಿದೆ. ಆದರೆ 2005ಕ್ಕೂ ಮುನ್ನ ತಂದೆ ತೀರಿದ್ದಲ್ಲಿ ಈ ಕಾಯ್ದೆ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆ ಇತ್ತು. ಈಗ ಈ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪಿನಿಂದ ಸ್ಪಷ್ಟತೆ ಲಭಿಸಿದೆ. ಅಲ್ಲದೆ 2005ರ ತೀರ್ಪಿನ ಅನಂತರ ತಂದೆ ಅಥವಾ ಪುತ್ರಿ ಬದುಕಿದ್ದರೆ ಮಾತ್ರ ಆಸ್ತಿಯಲ್ಲಿ ಸಮಾನ ಹಕ್ಕು ಕೇಳಬಹುದು ಎಂಬ ಕೆಳ ನ್ಯಾಯಾಲಯಗಳ ತೀರ್ಪುಗಳನ್ನೂ ಈ ತೀರ್ಪು ಬದಿಗಿರಿಸಿದೆ.
ಅನುಕೂಲವೇನು?
ಈ ತೀರ್ಪಿನಿಂದಾಗಿ 2005ರಲ್ಲಿ ಎಚ್‌ಎಸ್‌ಎ ಕಾಯ್ದೆ ತಿದ್ದುಪಡಿ ಆಗುವುದಕ್ಕೂ ಮುನ್ನ ಅಥವಾ ತಿದ್ದುಪಡಿಯ ಅನಂತರ ಪುತ್ರಿ ಜೀವಂತ ಇರಲಿ, ಇಲ್ಲದಿರಲಿ; ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹಳಾಗಿರುತ್ತಾಳೆ. ಪುತ್ರಿ ಜೀವಂತವಾಗಿಲ್ಲದಿದ್ದರೂ ಆಕೆಯ ಮಕ್ಕಳು ತಮ್ಮ ತಾಯಿಗೆ ಸಿಗಬೇಕಾದ ಹಕ್ಕುಗಳನ್ನು ಕೇಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.