Bharat Ratna ಸುದ್ದಿ ಕೇಳಿ ಭಾವುಕರಾದ ಅಡ್ವಾಣಿ ; ವಿಡಿಯೋ ನೋಡಿ
ರಾಮ ಮಂದಿರ ತಂದೆಯ ಜೀವಿತಾವಧಿಯಲ್ಲೇ ಸಾಧ್ಯವಾಯಿತು : ಜಯಂತ್ ಅಡ್ವಾಣಿ
Team Udayavani, Feb 3, 2024, 2:08 PM IST
ಹೊಸದಿಲ್ಲಿ: ಭಾರತ ಸರಕಾರ ಭಾರತ ರತ್ನ ಘೋಷಿಸಿದ ಸುದ್ದಿಯನ್ನು ಕೇಳಿ ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಭಾವನಾತ್ಮಕ ಕ್ಷಣಗಳಿಗೆ ಜಾರಿದ್ದು, ಆನಂದ ಭಾಷ್ಪ ಸುರಿಸಿದ್ದಾರೆ. ಪುತ್ರಿ ಪ್ರತಿಭಾ ಅಡ್ವಾಣಿ ಅವರು ತಂದೆಗೆ ಸಿಹಿತಿನ್ನಿಸಿ ಅಪ್ಪಿಕೊಂಡು ಸಂಭ್ರಮ ಅನುಭವಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಿಭಾ ಅಡ್ವಾಣಿ ” ಅಡ್ವಾಣಿ ಅವರು ತುಂಬಾ ಭಾವನಾತ್ಮಕ ಕ್ಷಣವನ್ನು ಅನುಭವಿಸುತ್ತಿದ್ದಾರೆ. ಅವರು ಮಿತಭಾಷಿ. ಅವರ ಕಣ್ಣಲ್ಲಿ ನೀರು ಬಂತು. ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟ ಸಂತೋಷ ಮತ್ತು ತೃಪ್ತಿಯನ್ನು ಹೊಂದಿದ್ದಾರೆ. ನಾವು ತುಂಬಾ ಸಂತೋಷವಾಗಿದ್ದೇವೆ ಎಂದಿದ್ದಾರೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿರುವುದಕ್ಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಾ ಸಂತೋಷವಾಗಿದೆ. ತಂದೆಯವರಿಗೂ ತುಂಬಾ ಖುಷಿಯಾಗಿದೆ.ಜೀವನದ ಇಳಿ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡುತ್ತಿರುವುದಕ್ಕೆ ಅವರು ಪ್ರಧಾನಿ ಹಾಗೂ ದೇಶದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದರು.
#WATCH | Daughter of veteran BJP leader LK Advani, Pratibha Advani shares sweets with him and hugs him.
Government of India announced Bharat Ratna for the veteran BJP leader. pic.twitter.com/zdYrGumkAq
— ANI (@ANI) February 3, 2024
ರಾಮ ಮಂದಿರ ತಂದೆಯ ಜೀವಿತಾವಧಿಯಲ್ಲಿ ಸಾಧ್ಯವಾಯಿತು : ಜಯಂತ್ ಅಡ್ವಾಣಿ
ಅಡ್ವಾಣಿ ಅವರ ಪುತ್ರ ಜಯಂತ್ ಅಡ್ವಾಣಿ ಅವರು ಪ್ರತಿಕ್ರಿಯಿಸಿ, ”ಇದು ನಮ್ಮ ಕುಟುಂಬ ಮತ್ತು ದೇಶದ ಎಲ್ಲರಿಗೂ ಬಹಳ ಸಂತೋಷದ ವಿಷಯ. ರಾಮಮಂದಿರ ಆಂದೋಲನ ಮತ್ತು ಪ್ರಾಣಪ್ರತಿಷ್ಠೆಯಲ್ಲಿ ಬಿಜೆಪಿ ನಾಯಕರ ಪಾತ್ರದ ಕುರಿತು ಅವರು ಹೇಳುತ್ತಾರೆ,ಇಂದು ದೇವಸ್ಥಾನವು ನಮ್ಮ ಮುಂದಿದೆ ಮತ್ತು ಇದು ಅವರ ಜೀವಿತಾವಧಿಯಲ್ಲೇ ಸಾಧ್ಯವಾಯಿತು. ಹಾಗಾಗಿ ನಾವು ತುಂಬಾ ಸಂತೋಷವಾಗಿದ್ದೇವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.