ದಾವೂದ್ ಸೋದರ ಸೆರೆಯಾಗುವಾಗ ಟಿವಿಯಲ್ಲಿ ಕೆಬಿಸಿ ನೋಡುತ್ತಿದ್ದ
Team Udayavani, Sep 19, 2017, 4:52 PM IST
ಥಾಣೆ : ಪಾಕಿಸ್ಥಾನದ ಕರಾಚಿಯಲ್ಲಿ ಅಡಗಿಕೊಂಡಿರುವ ಭಾರತದ ಮೋಸ್ಟ್ ವಾಂಟೆಡ್ ಭೂಗತ ಜಗತ್ತಿನ ಪಾತಕಿ ದಾವೂದ್ ಇಬ್ರಾಹಿಂ ನ ಸಹೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ನನ್ನು ದಕ್ಷಿಣ ಮುಂಬಯಿಯ ಆತನ ಸಹೋದರಿ ಮನೆಯಲ್ಲಿ ಸೋಮವಾರ ತಡ ರಾತ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಆತ ಟಿವಿಯಲ್ಲಿ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮವನ್ನು ವೀಕ್ಷಿಸುತ್ತಾ ಬಿರಿಯಾನಿ ಸವಿಯುತ್ತಿದ್ದ ಎಂದು ಥಾಣೆ ಪೊಲೀಸ್ ಕಮಿಷನರ್ ಪರಮಬೀರ್ ಸಿಂಗ್ ಇಂದು ಮಂಗಳವಾರ ತಿಳಿಸಿದ್ದಾರೆ.
ಥಾಣೆಯ ಸುಲಿಗೆ ನಿಗ್ರಹ ಪೊಲೀಸ್ ದಳದವರು ದಾವೂದ್ ಸಹೋದರ ಕಸ್ಕರ್‌ನನ್ನು ಆತನ ಸಹೋದರಿ ಹಸೀನಾ ಪಾರ್ಕರ್ ಳ ಮನೆಯಲ್ಲಿ ವಶಕ್ಕೆ ತೆಗೆದುಕೊಂಡು ಅನಂತರ ಬಂಧನದಲ್ಲಿ ಇರಿಸಿದ್ದರು. ಆತನನ್ನು ಬೇಗನೆ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ.
ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಿಲ್ಡರ್ ಒಬ್ಬರಿಂದ ನಾಲ್ಕು ಫ್ಯಾಟುಗಳು ಮತ್ತು 30 ಲಕ್ಷ ರೂ. ನಗದನ್ನು ಸುಲಿಗೆ ಮೊತ್ತವಾಗಿ ಕೇಳಿದ್ದ. ಕಸ್ಕರ್‌ನನ್ನು ತನಿಖೆಗೆ ಒಳಪಡಿಸಿದಾಗ ಆತನಿಂದ ಇನ್ನೂ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳ ಹೆಸರು ಬಹಿರಂಗವಾಗಿದೆ ಎಂದು ಸಿಂಗ್ ಹೇಳಿದರು.
ಇಕ್ಬಾಲ್ ಕಸ್ಕರ್ ಮತ್ತು ಪಾಕಿಸ್ಥಾನದ ಕರಾಚಿಯಲ್ಲಿ ಅಡಗಿಕೊಂಡಿರುವ ದಾವೂದ್ ಇಬ್ರಾಹಿಂನ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಗ್ರಹ ಕಾಯಿದೆ (ಮಕೋಕಾ) ಯನ್ನು ಅನ್ವಯಿಸಬಹುದೇ ಎಂಬುದನ್ನು ಪೊಲೀಸರೀಗ ಪರಿಶೀಲಿಸುತ್ತಿದ್ದಾರೆ ಎಂದು ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.