Panaji: ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳ; ತತ್ತರಿಸಿ ಹೋದ ಜನತೆ
ಏ.8-10: ಮಳೆ ಸಾಧ್ಯತೆ
Team Udayavani, Apr 5, 2024, 3:29 PM IST
ಪಣಜಿ: ಗೋವಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ತಾಪದಿಂದ ಜನತೆ ತತ್ತರಿಸಿ ಹೋಗುವಂತಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 33.5 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕಳೆದ ಕೆಲವು ದಿನಗಳಲ್ಲಿ 34 ಡಿಗ್ರಿ ತಲುಪಿತ್ತು.
ಗೋವಾ ರಾಜ್ಯದಲ್ಲಿ ನಿರಂತರವಾಗಿ ಏರುತ್ತಿರುವ ತಾಪಮಾನದಿಂದಾಗಿ, ಏಪ್ರಿಲ್ನಲ್ಲಿ ರಾಜ್ಯದಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗೋವಾ ಹವಾಮಾನ ವೀಕ್ಷಣಾಲಯವು ಈ ಶುಷ್ಕ ಬಿಸಿಲಿನಲ್ಲಿ ಮಳೆ ಬರುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಸೋಮವಾರದಿಂದ 3 ದಿನಗಳ ಕಾಲ ಅಂದರೆ ಏಪ್ರಿಲ್ 8 ರಿಂದ 10 ರವರೆಗೆ ರಾಜ್ಯದ ಕೆಲ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನಲಾಗಿದೆ.
ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ನಾಗರಿಕರು ಮಳೆಗಾಗಿ ಕಾಯುತ್ತಿದ್ದಾರೆ. ಶುಕ್ರವಾರ ಪಣಜಿಯಲ್ಲಿ ಗರಿಷ್ಠ ತಾಪಮಾನ 33.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ರಾಜ್ಯದಲ್ಲಿ ಬೆಳಿಗ್ಗೆ 73 ಮತ್ತು ಸಂಜೆ 59 ರಷ್ಟು ದಾಖಲಾಗಿದೆ, ಇದು ಸಾಮಾನ್ಯ ತೇವಾಂಶಕ್ಕಿಂತ 7% ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.