ಲಾಕ್ ಡೌನ್ ನಿಯಮ ಉಲ್ಲಂಘಿಸಿದನೆಂದು ಯುವಕನ ಕಪಾಳಕ್ಕೆ ಹೊಡೆದು ಮೊಬೈಲ್ ಒಡೆದು ಹಾಕಿದ ಡಿಸಿ
Team Udayavani, May 23, 2021, 8:11 AM IST
ಸೂರಜ್ ಪುರ: ಯುವಕನೋರ್ವ ಲಾಕ್ ಡೌನ್ ನಿಯಮ ಉಲ್ಲಂಘಿಸಿದನೆಂಬ ಕಾರಣಕ್ಕೆ ಜಿಲ್ಲಾಧಿಕಾರಿಯು ಯುವಕನ ಕಪಾಳಕ್ಕೆ ಬಾರಿಸಿ, ಆತನ ಮೊಬೈಲ್ ನ್ನು ರಸ್ತೆಗೆ ಎಸೆದು ಒಡೆದು ಹಾಕಿದ ಘಟನೆ ಚತ್ತೀಸ್ ಗಢ್ ರಾಜ್ಯದ ಸೂರಜ್ ಪುರ ಜಿಲ್ಲೆಯಲ್ಲಿ ನಡೆದಿದೆ.
ಸೂರಜ್ ಪುರ ಜಿಲ್ಲೆಯ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಮಾಡಿದ ಈ ಕೆಲಸ ಇದೀಗ ಟೀಕೆಗೆ ಗುರಿಯಾಗಿದೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಭಾರತ ಕೋವಿಡ್ ನಿಂದ ಮುಕ್ತವಾಗಲು ಆಸ್ಟ್ರೇಲಿಯಾ ಪ್ರಧಾನಿ ಪೂಜೆ
ಚತ್ತೀಸ್ ಗಢ್ ರಾಜ್ಯದಲ್ಲಿ ಲಾಕ್ ಡೌನ್ ವಿಧಿಸಲಾಗಿದೆ, ಜನರ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಆದರೆ ಯುವಕನು ಸ್ಥಳೀಯ ಮೆಡಿಕಲ್ ನಿಂದ ಔಷಧಿ ತರಲು ಹೋಗಿದ್ದ ಎನ್ನಲಾಗಿದ್ದು, ಎದುರು ಸಿಕ್ಕ ಡಿಸಿ ಕಪಾಳ ಮೋಕ್ಷ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲೇ ಇದ್ದ ಪೊಲೀಸರಲ್ಲಿ ಯುವಕನಿಗೆ ಹೊಡೆಸಿದ್ದು, ಎಫ್ ಐಆರ್ ಹಾಕಲು ಸೂಚಿಸಿದ್ದಾರೆ.
ಯುವಕ ತನ್ನಲ್ಲಿ ಇದ್ದ ಕೆಲವು ಕಾಗದಗಳನ್ನು ತೋರಿಸಿ ತಾನು ಔಷದಿ ಖರೀಸಿದಲು ಹೋಗುತ್ತಿದ್ದೇನೆ ಎಂದು ಹೇಳಿದರೂ ಡಿಸಿ ಶರ್ಮಾ ಕೇಳಲಿಲ್ಲ. ಬದಲಾಗಿ ಪೊಲೀಸರಲ್ಲಿ ಈತನಿಗೆ ಹೊಡೆಯಿರಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.