ವಿಶ್ವಹಿಂದೂ ಪರಿಷತ್, ಬಜರಂಗದಳವನ್ನು ಉಗ್ರ ಸಂಘಟನೆ ಎಂದು ಘೋಷಿಸಿ; ಮೌಲಾನಾ ರಜಾ ಖಾನ್
Team Udayavani, Feb 25, 2023, 10:48 AM IST
ಹೊಸದಿಲ್ಲಿ: ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ಉಗ್ರ ಸಂಘಟನೆಗಳು ಎಂದು ಘೋಷಿಸಿ, ಅವುಗಳನ್ನು ಬ್ಯಾನ್ ಮಾಡಬೇಕು ಎಂದು ಇತ್ತಿಹಾದ್-ಎ-ಮಿಲಾತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಖೀರ್ ರಜಾ ಖಾನ್ ಆಗ್ರಹಿಸಿದ್ದಾರೆ.
ಹರ್ಯಾಣದ ಭಿವಾನಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಈ ಹೇಳಿಕೆ ಬಂದಿದೆ. ಪಿಎಫ್ಐ ಬ್ಯಾನ್ ಮಾಡಿದ ರೀತಿಯಲ್ಲೇ ವಿಎಚ್ ಪಿ ಮತ್ತು ಬಜರಂಗದಳ ಬ್ಯಾನ್ ಮಾಡಿ ಎಂದು ಹೇಳಿದ್ದಾರೆ.
ಭಿವಾನಿ ಘಟನೆ ಫೆಬ್ರವರಿ 16 ರಂದು ನಡೆದಿದ್ದರೂ ನಾವು ಮೌನ ವಹಿಸಿದ್ದೇವೆ. ನಮ್ಮ ಮಕ್ಕಳ ಮೇಲೆ (ಜುನೈದ್ ಮತ್ತು ನಾಸಿರ್) ಸುಳ್ಳು ಆರೋಪಗಳನ್ನು ಹೊರಿಸಿ ಹತ್ಯೆ ಮಾಡಲಾಗಿದೆ. ಆರೋಪಿಗಳನ್ನು ಬೆಂಬಲಿಸಿ ಸಭೆಗಳು ಮತ್ತು ಮಹಾಪಂಚಾಯತ್‌ಗಳು ನಡೆಯುವುದನ್ನು ನೋಡಿದಾಗ ನಮಗೆ ಕೊಲೆಗಳು ಮತ್ತು ಗುಂಪು ಹತ್ಯೆಗಳು ಭಾರತದಲ್ಲಿ ಸಾಮಾನ್ಯ ಎಂದು ಅನಿಸುತ್ತಿದೆ” ಎಂದು ಮೌಲಾನಾ ತೌಖೀರ್ ರಜಾ ಖಾನ್ ಹೇಳಿರುವುದುನ್ನು ಎಎನ್ಐ ಉಲ್ಲೇಖಿಸಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಹೇಗೆ ಬ್ಯಾನ್ ಮಾಡಿದರೋ ಹಾಗೆಯೇ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನೂ ಬ್ಯಾನ್ ಮಾಡಬೇಕು ಎಂದು ಅವರು ಆಗ್ರಹಿಸಿದರು.
“ಭಿವಾನಿಯಲ್ಲಿ ನಡೆದ ಘಟನೆಯಿಂದ ಹಿಂದೂ ಸಮುದಾಯಕ್ಕೂ ತಪ್ಪು ಸಂದೇಶವನ್ನು ರವಾನಿಸುತ್ತದೆ, ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರನ್ನೂ ಹೀರೋಗಳೆಂಬ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಅವರು ಭಾವಿಸಬಹುದು. ಆಡಳಿತವು ಇದನ್ನು ಗಮನಿಸಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.