ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯೋಮಿತಿ ಇಳಿಕೆ?
Team Udayavani, Dec 21, 2018, 6:20 AM IST
ಹೊಸದಿಲ್ಲಿ: ಐಎಎಸ್, ಐಪಿಎಸ್ ಸೇರಿದಂತೆ ಅನೇಕ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋ ಮಿತಿಯನ್ನು ಸದ್ಯಕ್ಕಿರುವ 30 ವರ್ಷದಿಂದ 27 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರಕಾರಕ್ಕೆ ನೀತಿ ಆಯೋಗ ಸಲಹೆ ನೀಡಿದೆ.
ಅಲ್ಲದೆ ಇದನ್ನು 2022-23ರೊಳಗೆ ಹಂತಹಂತ ವಾಗಿ ಜಾರಿಗೊಳಿಸುವಂತೆ ತನ್ನ “ಸ್ಟ್ರಾಟೆಜಿ ಫಾರ್ ನ್ಯೂ ಇಂಡಿಯಾ 75′ ಎಂಬ ವರದಿಯಲ್ಲಿ ಸೂಚಿಸಿದೆ.
ಅಲ್ಲದೆ, ರಾಷ್ಟ್ರ ಹಾಗೂ ರಾಜ್ಯಗಳ ಮಟ್ಟದಲ್ಲಿ 60ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಅವುಗಳ ಬದಲಿಗೆ ರಾಷ್ಟ್ರಮಟ್ಟದಲ್ಲಿ ಕೇವಲ ಒಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅದರಲ್ಲಿ ಅಭ್ಯರ್ಥಿಯು ತೋರುವ ಸಾಧನೆ ಹಾಗೂ ಆತನ ಆಸಕ್ತಿಗಳ ಆಧಾರದ ಮೇಲೆ ನೇಮಕಾತಿಯಾಗಬೇಕು ಎಂದೂ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಜತೆಗೆ, ಕೆಳ ಹಂತದ ನ್ಯಾಯಾಲಯಗಳಲ್ಲಿನ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಅಧಿ ಕಾರಿಗಳನ್ನು ನೇಮಿಸಲು ರಾಷ್ಟ್ರಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಬೇಕೆಂದೂ ಆಯೋಗ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.